×
Ad

Bengaluru | ಆನ್‍ಲೈನ್ ಗೇಮಿಂಗ್ ಕಂಪೆನಿಯ ಮೇಲೆ ಈ.ಡಿ. ದಾಳಿ: ಕೋಟ್ಯಂತರ ಮೌಲ್ಯದ ಆಸ್ತಿ ವಶಕ್ಕೆ

Update: 2026-05-07 19:04 IST

ಸಾಂದರ್ಭಿಕ ಚಿತ್ರ | Photo Credit ; PTI

ಬೆಂಗಳೂರು, ಮೇ 7 : ರಮ್ಮಿ ಕಲ್ಚರ್ ಆ್ಯಪ್ ಮೂಲಕ ವಂಚನೆ ಪ್ರಕರಣದ ಸಂಬಂಧ ‘ಗೇಮ್ಸ್ ಕ್ರಾಫ್ಟ್’ ಎಂಬ ಆನ್‍ಲೈನ್ ಗೇಮಿಂಗ್ ಕಂಪೆನಿಯ ಮೇಲೆ ಬೆಂಗಳೂರು ಈ.ಡಿ. ಅಧಿಕಾರಿಗಳು ಹೊಸದಿಲ್ಲಿ ಹಾಗೂ ಬೆಂಗಳೂರಿನ 16 ಕಡೆಗಳಲ್ಲಿ ದಾಳಿ ನಡೆಸಿ ಕೋಟ್ಯಂತರ ಮೌಲ್ಯದ ಆಸ್ತಿ ವಶಕ್ಕೆ ಪಡೆದುಕೊಂಡಿರುವುದಾಗಿ ವರದಿಯಾಗಿದೆ.

ಗುರುವಾರ ರಮ್ಮಿ ಕಲ್ಚರ್ ಆ್ಯಪ್ ಮೂಲಕ ಜನರಿಗೆ ವಂಚನೆ ಮಾಡುತ್ತಿದ್ದವರ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆದಿದ್ದು ಈ ವೇಳೆ, ಈ.ಡಿ. ಅಧಿಕಾರಿಗಳು ಕೋಟ್ಯಂತರ ಮೌಲ್ಯದ ಆಸ್ತಿ ಮತ್ತು ಕೆಲ ಎಲೆಕ್ಟ್ರಾನಿಕ್ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ.

ಕೇಂದ್ರ ಸರಕಾರ ಹೊಸ ಕಾನೂನು ಜಾರಿಗೆ ತಂದಿದ್ದು, ಆನ್‍ಲೈನ್ ಬೆಟ್ಟಿಂಗ್ ಶಿಕ್ಷಾರ್ಹ ಅಪರಾಧವಾಗಿದೆ. ಆನ್‍ಲೈನ್ ಮನಿ ಗೇಮ್‍ಗಳನ್ನು ನೀಡುವುದರಿಂದ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಕೋಟಿ ರೂ.ವರೆಗೂ ದಂಡ ವಿಧಿಸಬಹುದು. ಆದರೆ, ಅಂತಹ ಆಟಗಳನ್ನು ಜಾಹೀರಾತು ಮಾಡಿದರೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 50 ಲಕ್ಷದವರೆಗೆ ದಂಡ ವಿಧಿಸಬಹುದು ಎಂದು ಆದೇಶ ಹೊರಡಿಸಲಾಗಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News