×
Ad

ಡಿ.11ರಿಂದ ನಂದಿ ಬೆಟ್ಟಕ್ಕೆ ಎಲೆಕ್ಟ್ರಿಕ್ ರೈಲು ಸೇವೆ ಆರಂಭ

Update: 2023-12-06 22:40 IST

 ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದ ಜನಪ್ರಿಯ ಪ್ರವಾಸಿ ತಾಣ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮಕ್ಕೆ ಡಿ.11ರಿಂದ ವಿದ್ಯುತ್ ರೈಲು ಆರಂಭಿಸಲು ನೈಋತ್ಯ ರೈಲ್ವೆ ನಿರ್ಧರಿಸಿದ್ದು, ದೇವನಹಳ್ಳಿಯಿಂದ ಚಿಕ್ಕಬಳ್ಳಾಪುರಕ್ಕೆ ವಿಮಾನ ನಿಲ್ದಾಣ ಮಾರ್ಗದಲ್ಲಿ ಕಾರ್ಯನಿರ್ವಹಿಸುವ ಮೇನ್‍ಲೈನ್ ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್ ರೈಲುಗಳನ್ನು ವಿಸ್ತರಿಸಲು ಚಿಂತನೆ ನಡೆಸಿದೆ.

06531/06532 ಬೆಂಗಳೂರು ಕಂಟೋನ್ಮೆಂಟ್-ಚಿಕ್ಕಬಳ್ಳಾಪುರ-ಕಂಟೋನ್ಮೆಂಟ್, 06535/06583 ಬೆಂಗಳೂರು ಕಂಟೋನ್ಮೆಂಟ್-ಚಿಕ್ಕಬಳ್ಳಾಪುರ, ಮತ್ತು 06593/06594 ಯಶವಂತಪುರ-ಚಿಕ್ಕಬಳ್ಳಾಪುರ-ಯಶವಂತಪುರ ರೈಲುಗಳು ಸಂಚರಿಸಲಿವೆ ಎಂದು ನೈಋತ್ಯ ರೈಲ್ವೆ ಇಲಾಖೆ ತಿಳಿಸಿದೆ.

ಪ್ರಸ್ತುತ, 06387/06388 ಕೆಎಸ್‍ಆರ್ ಬೆಂಗಳೂರು-ಕೋಲಾರ-ಕಂಟೋನ್ಮೆಂಟ್ ಡೀಸೆಲ್ ಮಲ್ಟಿಪಲ್ ಯುನಿಟ್ ಮತ್ತು 16549/16550 ಕೆಎಸ್‍ಆರ್ ಬೆಂಗಳೂರು–ಕೋಲಾರ-ಕೆಎಸ್‍ಆರ್ ಬೆಂಗಳೂರು ರೈಲುಗಳು ನಂದಿ ನಿಲ್ದಾಣದಲ್ಲಿ ನಿಲುಗಡೆ ಮಾಡುತ್ತವೆ ಎಂದು ನೈಋತ್ಯ ರೈಲ್ವೆ ಇಲಾಖೆ ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News