×
Ad

ಭ್ರೂಣ ಪತ್ತೆ, ಹತ್ಯೆ ಪ್ರಕರಣ: ಸ್ಕ್ಯಾನಿಂಗ್ ಯಂತ್ರ ಸರಬರಾಜು ಮಾಡಿದ್ದ ವ್ಯಕ್ತಿಯ ಬಂಧನ

Update: 2024-02-22 21:07 IST

ಬೆಂಗಳೂರು: ಬೈಯಪ್ಪನಹಳ್ಳಿಯಲ್ಲಿ ಹೆಣ್ಣು ಭ್ರೂಣ ಪತ್ತೆ, ಹತ್ಯೆ ಪ್ರಕರಣ ಸಂಬಂಧ ಸ್ಕ್ಯಾನಿಂಗ್ ಯಂತ್ರ ಸರಬರಾಜು ಮಾಡುತ್ತಿದ್ದ ವ್ಯಕ್ತಿಯೊರ್ವನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಸಿದ್ದೇಶ್ ಬಂಧಿತ ಆರೋಪಿಯಾಗಿದ್ದಾನೆ. ಇದೇ ಪ್ರಕರಣದಲ್ಲಿ ಫೆ.15ರಂದು ಲಕ್ಷ್ಮಣ್ ಗೌಡ ಎಂಬಾತನನ್ನು ಸೆರೆ ಹಿಡಿಯಲಾಗಿತ್ತು. ಈತನೂ ಮಂಗಳೂರಿನಲ್ಲಿ ಆವಿಷ್ಕಾರ ಬ್ರದರ್ಸ್ ಬಯೋ ಮೆಡಿಕಲ್ ಪ್ರೈ.ಲಿ ಕಂಪೆನಿ ಹೊಂದಿದ್ದ. ಅಲ್ಲಿಂದ ಮೂರು ಸ್ಕ್ಯಾನಿಂಗ್ ಯಂತ್ರಗಳನ್ನು ಅಕ್ರಮವಾಗಿ ನೀಡಿದ್ದ ಎನ್ನುವ ಮಾಹಿತಿ ಗೊತ್ತಾಗಿದೆ.

ಆಯುರ್ವೇದಿಕ್ ವೈದ್ಯ ಮಲ್ಲಿಕಾರ್ಜುನ ಎಂಬಾತನಿಗೆ ಸ್ಕ್ಯಾನಿಂಗ್ ಯಂತ್ರ ಕೊಟ್ಟಿದ್ದ. ಬಳಿಕ 3 ಸ್ಕ್ಯಾನಿಂಗ್ ಯಂತ್ರಗಳನ್ನು ಭ್ರೂಣ ಪತ್ತೆ ಗುಂಪಿಗೆ ಮಾರಾಟ ಮಾಡಿದ್ದ. ಈ ಪೈಕಿ ಒಂದು ಸ್ಕ್ಯಾನಿಂಗ್ ಮಷಿನ್ ನನ್ನು ಸಿಐಡಿ ಪೊಲೀಸರು ಜಪ್ತಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News