×
Ad

ಮಹಿಳೆಯರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವೆ: ಎಚ್.ಡಿ. ಕುಮಾರಸ್ವಾಮಿ

Update: 2024-04-15 11:28 IST

ಬೆಂಗಳೂರು, ಎ.15: ನನ್ನ ಹೇಳಿಕೆಯಿಂದ ಯಾವುದೇ ಮಹಿಳೆಯರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ಈ ವಿಷಯದಲ್ಲಿ ಪ್ರತಿಷ್ಠೆ ಇಲ್ಲ. ಗ್ಯಾರಂಟಿಗಳಿಂದ ಕಾಂಗ್ರೆಸ್ ದಾರಿತಪ್ಪಿಸುತ್ತಿದೆ ಎಂದಿದ್ದೇನೆಯೇ ಹೊರತು ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಅಂದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಪಕ್ಷದ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಚುನಾವಣಾ ಪ್ರಚಾರ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಮಾತನಾಡಿದ್ದೇನೆಯೇ ಹೊರತು ಮಹಿಳೆಯರನ್ನು ಅವಮಾನ ಮಾಡಿಲ್ಲ. ಗ್ಯಾರಂಟಿ ಯೋಜನೆಗಳಿಗೆ ಮಾರುಹೋಗಿ ಮಹಿಳೆಯರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದರಿಂದ ರಾಜ್ಯದ ಸಂಪತ್ತಿನ ಲೂಟಿ ಮತ್ತು ಸಾಲದ ಹೊರೆ ಹೆಚ್ಚಳ ಆಗಿರುವ ಕುರಿತು ಎಚ್ಚರಿಸಿದ್ದೆ. ಅದನ್ನು ತಪ್ಪಾಗಿ ಬಿಂಬಿಸಲಾಗಿದೆʼ ಎಂದರು.

ಮಹಿಳೆಯರ ಕುರಿತು ಎಲ್ಲಿಯೂ ಅವಮಾನಕರ ಪದಗಳನ್ನು ಬಳಸಿಲ್ಲ. ತಾಯಂದಿರು ಎಂಬ ಗೌರವಸೂಚಕ ಪದವನ್ನು ಬಳಸಿಯೇ ಮಾತನಾಡಿದ್ದೇನೆ. ದಾರಿ ತಪ್ಪಿದ್ದಾರೆ ಎಂಬುದು ಅಶ್ಲೀಲ ಪದವಲ್ಲ. ಮನೆಯಲ್ಲಿ ಮಕ್ಕಳಿಗೆ ದಾರಿ ತಪ್ಪಬೇಡಿ ಎಂದು ಹೇಳುವುದಿಲ್ಲವೆ? ಅದು ಹೇಗೆ ತಪ್ಪಾಗುತ್ತದೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News