×
Ad

ಭ್ರೂಣ ಲಿಂಗ ಪತ್ತೆ, ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ

Update: 2023-12-03 00:00 IST

ಬೆಂಗಳೂರು: ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿಯನ್ನು ಇಲ್ಲಿನ ಬೈಯ್ಯಪ್ಪನಹಳ್ಳಿ ಠಾಣಾ ಪೊಲೀಸರು ಬಂಧಿಸಿರುವುದು ವರದಿಯಾಗಿದೆ.

ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಕೆಲಸ ಮಾಡುತ್ತಿದ್ದ ಮಂಜುಳಾ ಎಂಬಾಕೆಯನ್ನು ಬಂಧಿಸಲಾಗಿದೆ.

ಪ್ರಕರಣದ ಮತ್ತೋರ್ವ ಆರೋಪಿ ಆಗಿರುವ ಡಾ.ಚಂದನ್ ಬಲ್ಲಾಳ್ ಒಡೆತನದ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮಂಜುಳಾ, ಪ್ರಕರಣ ಬೆಳಕಿಗೆ ಬಂದ ಬಳಿಕ ಕೆಲಸ ತೊರೆದು ಮತ್ತೊಂದು ಖಾಸಗಿ ಆಸ್ಪತ್ರೆಯಲ್ಲಿ ಕೆಲಸಕ್ಕೆ ಸೇರಿದ್ದರು.

ತಲೆಮರೆಸಿಕೊಂಡಿದ್ದ ಮಂಜುಳಾಗಾಗಿ ಹುಡುಕಾಟ ನಡೆಸಿದ್ದ ಪೊಲೀಸರು, ಆಕೆ ಕೆಲಸ ಮಾಡುತ್ತಿದ್ದ ಖಾಸಗಿ ಆಸ್ಪತ್ರೆಯಿಂದಲೇ ವಶಕ್ಕೆ ಪಡೆದಿದ್ದಾರೆ. ಆ ಮೂಲಕ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ ಹತ್ತಕ್ಕೇರಿದಂತಾಗಿದೆ.

ಸುಮಾರು ಒಂದು ವರ್ಷದಿಂದ ತಾನು ಡಾ.ಚಂದನ್ ಬಲ್ಲಾಳ್ ಬಳಿ ಕೆಲಸ ಮಾಡುತ್ತಿದ್ದು, ತಿಂಗಳಿಗೆ ಸುಮಾರು 70 ಗರ್ಭಪಾತ ಮಾಡಿರುವುದಾಗಿ ಪೊಲೀಸರ ಮುಂದೆ ಮಂಜುಳಾ ತಪ್ಪೊಪ್ಪಿಕೊಂಡಿರುವುದಾಗಿ ತಿಳಿದು ಬಂದಿದೆ.

ಸಿಐಡಿಗೆ ಪ್ರಕರಣ ವರ್ಗಾವಣೆ: ಇನ್ನು ಪ್ರಕರಣದ ತನಿಖೆ ಡಿ.2ರಂದು ಅಧಿಕೃತವಾಗಿ ಸಿಐಡಿಗೆ ವರ್ಗಾವಣೆಯಾಗಲಿದೆ. ಪ್ರಕರಣದ ವರದಿ ಹಾಗೂ ಬಂಧಿತ ಆರೋಪಿಗಳನ್ನು ಬೈಯ್ಯಪ್ಪನಹಳ್ಳಿ ಠಾಣಾ ಪೊಲೀಸರು ಸಿಐಡಿ ವಶಕ್ಕೊಪ್ಪಿಸಲಿದ್ದಾರೆ ಎನ್ನಲಾಗಿದೆ. ಈ ಪ್ರಕರಣದ ಮುಂದಿನ ತನಿಖಾಧಿಕಾರಿಯಾಗಿ ಸಿಐಡಿಯ ಡಿವೈಎಸ್ಪಿ ನಾಗರಾಜ್ ನೇಮಕವಾಗಿದ್ದು, ಇದುವರೆಗಿನ ತನಿಖೆಯನ್ನು ಬೈಯಪ್ಪನಹಳ್ಳಿ ಇನ್‍ಸ್ಪೆಕ್ಟರ್ ಎಂ.ಪ್ರಶಾಂತ್ ನಡೆಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News