×
Ad

FIFA World Cup : ಬೆಂಗಳೂರು ಹೋಟೆಲ್‌ಗಳಲ್ಲಿ ಮಧ್ಯರಾತ್ರಿ 3.30ರವರೆಗೆ ಸಿಗಲಿದೆ ಆಹಾರ

Update: 2026-07-14 17:59 IST

ಸಾಂದರ್ಭಿಕ ಚಿತ್ರ (AI)

ಬೆಂಗಳೂರು : ಫಿಫಾ ವಿಶ್ವಕಪ್ ಪಂದ್ಯಗಳ ಹಿನ್ನೆಲೆಯಲ್ಲಿ ಪಂದ್ಯ ನಡೆಯುವ ಮೂರು ದಿನಗಳ ಕಾಲ ಮಧ್ಯರಾತ್ರಿ 3.30ರವರೆಗೆ ಬೆಂಗಳೂರಿನ ಹೋಟೆಲ್‌ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಆಹಾರ ಸೇವೆಗೆ ಸರಕಾರ ಅವಕಾಶ ಕಲ್ಪಿಸಿದೆ.

ಭಾರತ ರಾಷ್ಟ್ರೀಯ ರೆಸ್ಟೋರೆಂಟ್ ಸಂಸ್ಥೆ ಮನವಿ ಮೇರೆಗೆ ವಿಶ್ವಕಪ್ ಪಂದ್ಯಗಳು ನಡೆಯಲಿರುವ ಜುಲೈ 14, 15 ಹಾಗೂ 19ರಂದು ಈ ಆದೇಶ ಅನ್ವಯವಾಗುವಂತೆ ಸರಕಾರದಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಯುಎಸ್ಎ, ಕೆನಡಾ ಹಾಗೂ ಮೆಕ್ಸಿಕೋ ದೇಶಗಳ ಜಂಟಿ ಆತಿಥ್ಯದಲ್ಲಿ ಆಯೋಜನೆಯಾಗಿರುವ ಫಿಫಾ ವಿಶ್ವಕಪ್ ಫುಟ್‌ಬಾಲ್ ಟೂರ್ನಿ ಅಂತಿಮ ಘಟ್ಟ ತಲುಪಿದೆ.

ಜುಲೈ 15ರಂದು ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಫ್ರಾನ್ಸ್ ಹಾಗೂ ಸ್ಪೇನ್ ತಂಡಗಳು ಮುಖಾಮುಖಿಯಾಗುತ್ತಿವೆ. ಜುಲೈ 16ರಂದು ಎರಡನೇ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ಹಾಗೂ ಅರ್ಜೆಂಟೀನಾ ತಂಡಗಳು ಸೆಣಸಾಡಲಿವೆ.

ಜುಲೈ 20ರಂದು ನ್ಯೂಯಾರ್ಕ್‌ನಲ್ಲಿ ಫೈನಲ್ ಪಂದ್ಯ ನಡೆಯಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News