×
Ad

ಬಿಜೆಪಿಯ ಅಧಿಕೃತ ಎಕ್ಸ್ ಖಾತೆ ಮೇಲೆ ಎಫ್‍ಐಆರ್ ದಾಖಲು

Update: 2024-04-24 20:45 IST

ಬೆಂಗಳೂರು: ಕಾಂಗ್ರೆಸ್ ಪ್ರಣಾಳಿಕೆಯನ್ನು ಮುಸ್ಲಿಮ್ ಲೀಗ್ ಪ್ರಣಾಳಿಕೆಯೋ ಎಂದು ಟೀಕಿಸಿ ಪೋಸ್ಟ್ ಹಾಕಿದ್ದ ರಾಜ್ಯ ಬಿಜೆಪಿಯ ಅಧಿಕೃತ ಎಕ್ಸ್ ಖಾತೆ ವಿರುದ್ಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ಕಾಂಗ್ರೆಸ್ ಪ್ರಣಾಳಿಕೆಯನ್ನು ‘ಕೈ’ ಪ್ರಣಾಳಿಕೆಯೋ, ಮುಸ್ಲಿಂ ಲೀಗ್ ಪ್ರಣಾಳಿಕೆಯೋ ಎಂದು ಬಿಜೆಪಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿತ್ತು. ಈ ಬಗ್ಗೆ ಚುನಾವಣಾ ಆಯೋಗದ ಎಫ್‍ಎಸ್‍ಟಿ ತಂಡವು ಮಲ್ಲೇಶ್ವರಂ ಠಾಣೆಗೆ ದೂರು ನೀಡಿತ್ತು.

ಈ ಹಿನ್ನೆಲೆಯಲ್ಲಿ ಆರ್ ಪಿ ಕಾಯ್ದೆ 125 ಮತ್ತು ಐಪಿಸಿ 153 ಅಡಿಯಲ್ಲಿ ದ್ವೇಷ ಮತ್ತು ಎರಡು ಗುಂಪುಗಳ ನಡುವೆ ಸ್ವಾಸ್ಥ್ಯ ಕೆಡಿಸಲು ಯತ್ನಿಸಿದ ಆರೋಪ ಮೇಲೆ ಬಿಜೆಪಿ ಎಕ್ಸ್ ಖಾತೆ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News