×
Ad

ಪತ್ನಿಗೆ ವರದಕ್ಷಿಣೆ ಕಿರುಕುಳ ಹಲ್ಲೆ, ಹಲ್ಲೆ ಆರೋಪ | ಧರ್ಮಸ್ಥಳ ಸಬ್‍ಇನ್ಸ್‌ಪೆಕ್ಟರ್ ವಿರುದ್ಧ ಎಫ್‍ಐಆರ್

Update: 2025-03-25 22:27 IST

ಬೆಂಗಳೂರು : ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಹಲ್ಲೆ ನಡೆಸಿರುವ ಆರೋಪ ಸಂಬಂಧ ಧರ್ಮಸ್ಥಳ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಕಿಶೋರ್ ವಿರುದ್ಧ ಚಂದ್ರಲೇಔಟ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ಪತ್ನಿ ವರ್ಷಾ ಮೇಲೆ ಕಿಶೋರ್ ವರದಕ್ಷಿಣೆ ವಿಚಾರವಾಗಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇತ್ತೀಚಿಗೆ ವರ್ಷಾಳಿಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಲಾಗಿತ್ತು. ತೀವ್ರ ಗಾಯಗೊಂಡಿದ್ದ ವರ್ಷಾ ಅನ್ನು ಧರ್ಮಸ್ಥಳದ ಆಸ್ಪತ್ರೆಗೆ ಸೇರಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಸಂಬಂಧ ಪೋಷಕರು ನೀಡಿರುವ ದೂರಿನ್ವಯ ಚಂದ್ರ ಲೇಔಟ್ ಪೊಲೀಸ್ ಠಾಣೆಯಲ್ಲಿ ಧರ್ಮಸ್ಥಳ ಠಾಣೆಯ ಸಬ್ ಇನ್ಸ್‌ ಪೆಕ್ಟರ್ ಕಿಶೋರ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News