×
Ad

ಬೆಂಗಳೂರು | ಕಡಿಮೆ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸರಕಾರಿ ಶಾಲೆಗೆ ಸೇರಿಸಿದ ಖಾಸಗಿ ಶಾಲೆಯ ವಿರುದ್ಧ ಎಫ್‌ಐಆರ್

Update: 2025-06-21 23:28 IST

ಸಾಂದರ್ಭಿಕ ಚಿತ್ರ

ಬೆಂಗಳೂರು: 9ನೇ ತರಗತಿಯಲ್ಲಿ ಕಡಿಮೆ ಅಂಕ ಪಡೆದ ಮಕ್ಕಳನ್ನು ತಾವೇ ಸರಕಾರಿ ಶಾಲೆಗೆ ಸೇರಿಸಿ, ಎಸೆಸೆಲ್ಸಿ ಪರೀಕ್ಷೆ ಬರೆಸಿದ ಆರೋಪದ ಮೇಲೆ ವಸಂತ ನಗರದ ಸೈಂಟ್ ಮೇರೀಸ್ ಬಾಲಕಿಯರ ಪ್ರೌಢಶಾಲೆಯ ಮೂವರು ಶಿಕ್ಷಕರ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿರುವುದು ವರದಿಯಾಗಿದೆ.

ಪೋಷಕರ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಈ ಸಂಬಂಧ ಖಾಸಗಿ ಶಾಲೆಯ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಪೋಷಕರ ಗಮನಕ್ಕೂ ಬಾರದೆ ಅನಾಥ ಮಕ್ಕಳು ಎಂದು ಸರಕಾರಿ ಶಾಲೆಗೆ ಸೇರಿಸಿದ್ದಾರೆ. ಸರಕಾರಿ ಶಾಲೆ ಸಮವಸ್ತ್ರ ಹಾಕಿ ಫೋಟೊ ತೆಗೆದುಕೊಂಡಿದ್ದಾರೆ. ನಂತರ ಪರೀಕ್ಷೆಯ ಪ್ರವೇಶಪತ್ರ ನೀಡಿ, ಸರಕಾರಿ ಶಾಲೆಯಲ್ಲೇ ಪರೀಕ್ಷೆ ಬರೆಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News