×
Ad

ಅಕ್ರಮ ವಲಸಿಗರ ಕುರಿತು ಸುಳ್ಳು ಸುದ್ದಿ ಹರಡಿದ ಆರೋಪ : ಪುನೀತ್ ಕೆರೆಹಳ್ಳಿ ವಿರುದ್ಧ ಎಫ್‌ಐಆರ್

Update: 2026-01-26 15:04 IST

ಪುನೀತ್ ಕೆರೆಹಳ್ಳಿ 

ಬೆಂಗಳೂರು: ಅಕ್ರಮ ವಲಸಿಗರ ಬಗ್ಗೆ ಸುಳ್ಳು ಸುದ್ದಿ ಹರಡುವ ಮೂಲಕ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತಂದ ಆರೋಪದಡಿ ಕೊಲೆ ಪ್ರಕರಣವೊಂದರ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಜ. 22ರಂದು ಪುನೀತ್ ಕೆರೆಹಳ್ಳಿ ಮತ್ತು ಸಹಚರರು ಸೋಲದೇವನಹಳ್ಳಿ ಸಮೀಪದ ಕೆಂಪಾಪುರದಲ್ಲಿರುವ ಶ್ವೇತಾ ಫಾರಂ ರಸ್ತೆಯ ಸಕೀನಾ ತಸ್ನೀಮ್ ಅವರ ಜಾಗಕ್ಕೆ ಹೋದಾಗ ಗಲಾಟೆ ನಡೆಸಿದ್ದರು. ಅಲ್ಲೇ ಅವರು ಬಾಂಗ್ಲಾದೇಶದವರು ಅಕ್ರಮವಾಗಿ ಇಲ್ಲಿ ನೆಲಸಿದ್ದಾರೆ ಎಂದು ಸುಳ್ಳು ವಾಗ್ವಾದ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಶ್ವೇತಾ ಫಾರಂ ರಸ್ತೆಯ ಆ ಜಾಗವು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎಂ.ಎ. ಸಲೀಂ ಅವರ ಬೇನಾಮಿ ಆಸ್ತಿಯಾಗಿದೆ ಎಂದು ಸುಳ್ಳು ಆರೋಪವೂ ಮಾಡಿದ್ದರು. ಅಲ್ಲದೆ, ಆ ಜಾಗದಲ್ಲಿ ಬಾಂಗ್ಲಾ ಪ್ರಜೆಗಳು ಅಕ್ರಮವಾಗಿ ನೆಲಸಿದ್ದಾರೆ ಎಂದು ವಿಡಿಯೊ ಚಿತ್ರೀಕರಿಸಿ ಫೇಸ್‍ಬುಕ್ ಮತ್ತು ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಈ ಘಟನೆಯಿಂದ ಸಮಾಜದಲ್ಲಿ ಶಾಂತಿ, ಸಮುದಾಯ ಸೌಹಾರ್ದತೆ ಹಾಗೂ ಸಾರ್ವಜನಿಕರ ಮನದಲ್ಲಿ ಕಲಹದ ಪರಿಸ್ಥಿತಿ ಉಂಟಾಗಿ ಹೋಗಿರುವುದರಿಂದ, ಸಮಾಜವನ್ನು ಪ್ರಚೋದಿಸಿದ ಹಾಗೂ ಮಾಹಿತಿ ತಂತ್ರಜ್ಞಾನದ ದುರ್ಬಳಕೆ ಮಾಡಿದ ಆರೋಪದಡಿ ಪುನೀತ್ ಕೆರೆಹಳ್ಳಿ ಮತ್ತು ಸಹಚರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗೂಢಚಾರಣಾ ಪ್ರಕರಣಕ್ಕೆ ನ್ಯಾಯಾಲಯದ ವಿಚಾರಣೆಗೆ ಹಾಜರಿರುವಾಗ, 2025ರ ಕ್ರಿಮಿನಲ್ ಪ್ರಕರಣದಲ್ಲಿ ಕೂಡ ಹಾಜರಾಗಿದ್ದ ಪುನೀತ್ ಕೆರೆಹಳಿಯನ್ನು ಬಾಗಲಗುಂಟೆ ಠಾಣೆ ಪೊಲೀಸರು ಜನವರಿ 23ರಂದು ಬಂಧಿಸಿದ್ದರು. ನಂತರ ನ್ಯಾಯಾಲಯದ ಆದೇಶದ ಮೇರೆಗೆ ಅವರಿಗೆ ಜಾಮೀನು ನೀಡಲಾಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News