×
Ad

ಬೆಂಗಳೂರಿನಲ್ಲಿ ಪಟಾಕಿ ಅವಘಡ; ಮೂರು ದಿನಗಳಲ್ಲಿ 83ಕ್ಕೂ ಅಧಿಕ ಮಂದಿಗೆ ಗಾಯ

Update: 2025-10-21 19:00 IST

ಸಾಂದರ್ಭಿಕ ಚಿತ್ರ | PC : freepik

ಬೆಂಗಳೂರು : ದೀಪಾವಳಿ ಹಬ್ಬದ ಸಂಭ್ರದಲ್ಲಿ ಪಟಾಕಿ ಸಿಡಿಸುವ ವೇಳೆ ಬೆಂಗಳೂರು ನಗರದಲ್ಲಿಯೇ ಕಳೆದ ಮೂರು ದಿನಗಳಲ್ಲಿಯೇ 83ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಮಿಂಟೋ ಕಣ್ಣಿನ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇಲ್ಲಿನ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಇಬ್ಬರಿಗೆ ಶಸ್ತ್ರಚಿಕಿತ್ಸೆ ಸೇರಿದಂತೆ ಒಟ್ಟು 13 ಮಂದಿಗೆ ಚಿಕಿತ್ಸೆ ನೀಡಲಾಗಿದೆ. ಸೋಮವಾರ ಇಬ್ಬರು ಮಕ್ಕಳ ಕಣ್ಣಿಗೆ ಪಟಾಕಿ ಸಿಡಿಸುವಾಗ ಹಾನಿಯಾಗಿದ್ದು, ಅವರಿಗೆ ಚಿಕಿತ್ಸೆ ನೀಡಿ ಕಳುಹಿಸಲಾಗಿದೆ. ನಿನ್ನೆ ರಾತ್ರಿಯಿಂದ ಮಂಗಳವಾರ ಸಂಜೆವರೆಗ 11 ಮಂದಿ ಆಸ್ಪತ್ರೆ ಆಗಮಿಸಿದ್ದರು. ಅವರಲ್ಲಿ 7 ಮಕ್ಕಳಿಗೆ ಸಾಧಾರಣ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗಿದೆ ಎಂದು ಮಿಂಟೋ ಆಸ್ಪತ್ರೆ ತಿಳಿಸಿದೆ.

ನಾಲ್ವರಿಗೆ ತೀವ್ರ ತೊಂದರೆಯಾಗಿದ್ದು, ತೀವ್ರ ಹಾನಿಯಾಗಿದ್ದ ಇಬ್ಬರ ಕಣ್ಣುಗಳಿಗೆ ಶಸ್ತ್ರಚಿಕಿತ್ಸೆ ನಡೆಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನಿಬ್ಬರ ಕಣ್ಣಿನಲ್ಲಿ ತೀವ್ರ ರಕ್ತಸ್ರಾವ ಆಗಿದ್ದು, ಒಳ ರೋಗಿಗಳಾಗಿ ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ, ಒಟ್ಟಿನಲ್ಲಿ ಪಟಾಕಿಯಿಂದ ಗಾಯಗೊಂಡಿರುವ 13 ಮಂದಿಯಲ್ಲಿ 10 ಗಂಡು ಮಕ್ಕಳು ಹಾಗೂ ಮೂವರು ಹೆಣ್ಣು ಮಕ್ಕಳು ಸೇರಿದ್ದಾರೆ ಎಂದು ಮಿಂಟೋ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ನಾರಾಯಣ ನೇತ್ರಾಲಯದಲ್ಲಿ ಅ.19 ರಿಂದ ಮಂಗಳವಾರದ ವರೆಗೆ, ಪಟಾಕಿ ಸಂಬಂಧಿತ ಕಣ್ಣಿನ ಗಾಯಗಳು ಸಂಖ್ಯೆ 43ಕ್ಕೆ ಏರಿಕೆಯಾಗಿದೆ. 18 ವರ್ಷದ ಯುವಕನಿಗೆ ಗಂಭೀರ ಕಣ್ಣಿನ ಗಾಯವಾಗಿದೆ.10 ವರ್ಷದ ಬಾಲಕನೊಬ್ಬ ಪಟಾಕಿ ಹಚ್ಚುವಾಗ ಅದು ಆತನ ಮುಖದ ಬಳಿಯೇ ಸ್ಫೋಟಗೊಂಡ ಕಾರಣ ತಕ್ಷಣವೇ ತುರ್ತು ಚಿಕಿತ್ಸೆಗೆ ದಾಖಲಿಸಲಾಯಿತು ಎಂದು ನಾರಾಯಣ ಆಸ್ಪತ್ರೆ ತಿಳಿಸಿದೆ.

ಇತ್ತ ಶೇಖರ್ ಕಣ್ಣಿನ ಆಸ್ಪತ್ರೆಯಲ್ಲಿ ಪಟಾಕಿ ಸಿಡಿತದಿಂದ ಗಾಯಗೊಂಡಿದ್ದ ಐವರಿಗೆ ಚಿಕಿತ್ಸೆ ನೀಡಲಾಗಿದೆ. ಹೀಗೆ, ಕಳೆದ ಮೂರು ದಿನಗಳಲ್ಲಿ 83ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದ್ದು, ಈ ಪೈಕಿ ದೀಪಾವಳಿ ಹಬ್ಬದ ಪಟಾಕಿ ಸಿಡಿಸಿದವರಲ್ಲದೆ, ಪಟಾಕಿ ಸಿಡಿಸುವುದನ್ನು ನೋಡುತ್ತಾ ನಿಂತವರು, ರಸ್ತೆಗಳಲ್ಲಿ ನಡೆದು ಹೋಗುತ್ತಿದ್ದವರೂ ಸೇರಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News