ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆಯ ಬೆನ್ನಲ್ಲೇ ಮೊಸರಿನ ದರವನ್ನೂ ಏರಿಕೆ ಮಾಡಿ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಶುಕ್ರವಾರ ಆದೇಶ ಹೊರಡಿಸಿದೆ. ಒಂದು ಲೀಟರ್ ಮೊಸರಿಗೆ 14 ರೂ. ಮಾಡಲಾಗಿದೆ. ಪರಿಷ್ಕೃತ ದರಗಳು ನವೆಂಬರ್ 1ರಿಂದಲೇ ಜಾರಿಗೆ ಬರಲಿವೆ.

ಪರಿಷ್ಕೃತ ದರದ ಪ್ರಕಾರ, ಅರ್ಧ ಲೀಟರ್ ಮೊಸರಿನ ಬೆಲೆ 28 ರೂ.ನಿಂದ 34 ರೂ.ಗೆ ಏರಿಕೆಯಾಗಿದ್ದರೆ, ಒಂದು ಲೀಟರ್ ಮೊಸರಿನ ದರ 54 ರೂ.ನಿಂದ 68 ರೂ.ಗೆ ಏರಿಕೆಯಾಗಿದೆ.

ಇದಲ್ಲದೆ ವಿವಿಧ ಮಾದರಿಯ ಹಾಲಿನ ದರದಲ್ಲೂ ಏರಿಕೆ ಮಾಡಲಾಗಿದೆ. ಟೋನ್ಡ್ ಹಾಲಿನ ಬೆಲೆ 46 ರೂ.ನಿಂದ 54 ರೂ. ಅಂದರೆ ಎಂಟು ರೂ., ಹೋಮೋಜಿನೈಸ್ಡ್ ಟೋನ್ಡ್ ಹಾಲಿನ ದರ 47 ರೂ.ನಿಂದ 56 ರೂ. ಅಂದರೆ 9 ರೂ. ಹೆಚ್ಚಿಸಲಾಗಿದೆ.

ಹೋಮೋಜಿನೈಸ್ಡ್ ಹಸುವಿನ ಹಾಲಿನ ಬೆಲೆ 50 ರೂ.ನಿಂದ 58 ರೂ.ಗೆ ಏರಿಕೆಯಾಗಿದ್ದರೆ, ಸ್ಪೆಷಲ್ ಟೋನ್ಡ್ ಹಾಲು ಮತ್ತು ಶುಭಂ ಹಾಲಿನ ದರ ತಲಾ 52 ರೂ.ನಿಂದ 64 ರೂ.ಗೆ ಹೆಚ್ಚಳವಾಗಿದೆ. ಹೋಮೋಜಿನೈಸ್ಡ್ ಶುಭಂ ಹಾಲಿನ ಬೆಲೆ 53 ರೂ.ನಿಂದ 65 ರೂ.ಗೆ ಏರಿಕೆಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor