ಬೆಂಗಳೂರು : ಸರಕಾರದ ಆಡಳಿತದ ಕೊಂಡಿಯಾಗಿ ಕಾರ್ಯ ನಿರ್ವಹಿಸುವ ಆಶಾ ಕಾರ್ಯಕರ್ತೆಯರ ಹೋರಾಟವು 9ನೆ ದಿನಕ್ಕೆ ಕಾಲಿಟ್ಟಿದ್ದು, ಇದು ಅತ್ಯಂತ ಬೇಸರದ ವಿಷಯವಾಗಿದೆ. ಇದಕ್ಕೆ ಸಂಬಂಧಿಸಿದಂತೆ ನಾನೂ ಸರಕಾರಕ್ಕೆ ಪತ್ರ ಬರೆಯಲಿದ್ದು ಸಿಎಂ ಜೊತೆಗೂ ವೈಯಕ್ತಿಕವಾಗಿ ಮಾತನಾಡಲಿದ್ದೇನೆ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಬುಧವಾರ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲ ಸೂಚಿಸಿ ಪ್ರತಿಕ್ರಿಯಿಸಿದ ಅವರು, ಕೋವಿಡ್ ಸೋಂಕಿನ ಸಂದರ್ಭದಿಂದ ಹಿಡಿದು ಇಲ್ಲಿಯ ವರೆಗೆ ಸರಕಾರದ ಹಲವು ಯೋಜನೆ ಮತ್ತು ಯೋಚನೆಯ ಸಂದರ್ಭದಲ್ಲಿ ಸರಕಾರದ ಆಡಳಿತ ಯಂತ್ರವು ಸುಗಮವಾಗಿ ನಡೆಯಲು ಆಶಾ ಕಾರ್ಯಕರ್ತೆಯರು ಸಹಾಯ ಮಾಡಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ನ್ಯಾಯಯುತವಾದ ಬೇಡಿಕೆಯನ್ನು ಈಡೇರಿಸುವುದು ಯಾವುದೇ ಸರಕಾರದ ಜವಾಬ್ದಾರಿ ಆಗಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಹಿಂದಿನ ಕಾಂಗ್ರೆಸ್ ಪಕ್ಷದ ಅಧಿಕಾರದ ಸಂದರ್ಭದಲ್ಲಿ ಕೇವಲ 2 ರಿಂದ 3 ಸಾವಿರ ರೂ. ಇದ್ದ ಪೌರ ಕಾರ್ಮಿಕರ ವೇತನವನ್ನು ಸುಮಾರು 16 ರಿಂದ 17ಸಾವಿರ ರೂ.ಗೆ ಹೆಚ್ಚಿಸಿ ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗಿತ್ತು. ಈ ಹಿನ್ನಲೆಯಲ್ಲಿ ಕನಿಷ್ಠ ವೇತನ ಕಾಯ್ದೆಯಡಿ ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಘನತೆ ವೇತನ ನಿಗದಿ ಪಡಿಸುವುದು ನಿಜಕ್ಕೂ ಉಪಯುಕ್ತವಾದ ಕೆಲಸವಾಗಿದೆ ಎಂದು ಅವರು ಹೇಳಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor