ಮಾಜಿ ಶಾಸಕ ಆರ್.ವಿ.ದೇವರಾಜ್ ಹೃದಯಾಘಾತದಿಂದ ನಿಧನ
Update: 2025-12-01 23:58 IST
ಆರ್.ವಿ.ದೇವರಾಜ್
ಬೆಂಗಳೂರು : ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ.ದೇವರಾಜ್ ಹೃದಯಾಘಾತದಿಂದ ಇಂದು (ಡಿ.1) ನಿಧನರಾಗಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದಾಗ ಅವರಿಗೆ ಹೃದಯಾಘಾತವಾಗಿದೆ ಎಂದು ತಿಳಿದುಬಂದಿದೆ. ಈ ವೇಳೆ ಮೈಸೂರಿನಲ್ಲಿರುವ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಆದರೆ ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.