×
Ad

ಬೆಂಗಳೂರು | ಡಿ.ಕೆ.ಸುರೇಶ್ ಸಹೋದರಿ ಹೆಸರಿನಲ್ಲಿ ವಂಚನೆ : ಎಫ್‍ಐಆರ್ ದಾಖಲು

Update: 2024-12-24 19:14 IST

ಬೆಂಗಳೂರು : ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಸಹೋದರಿ ಎಂದು ನಂಬಿಸಿ ಚಿನ್ನದ ವ್ಯಾಪಾರಿಯೊಬ್ಬರಿಗೆ 9.82 ಕೋಟಿ ರೂ. ವಂಚಿಸಿರುವ ಆರೋಪ ಸಂಬಂಧ ನಟ ಸೇರಿ ಮೂವರ ವಿರುದ್ಧ ಇಲ್ಲಿನ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ಇಲ್ಲಿನ ವಾರಾಹಿ ವರ್ಲ್ಡ್‌ ಆಫ್ ಗೋಲ್ಡ್ ಚಿನ್ನದಂಗಡಿಯ ಮಾಲೀಕರಾದ ವನಿತಾ ಎಸ್.ಐತಾಳ್ ಅವರು ನೀಡಿರುವ ದೂರಿನನ್ವಯ ಐಶ್ವರ್ಯಾ ಗೌಡ, ಹರೀಶ್ ಕೆ.ಎನ್ ಹಾಗೂ ನಟ ಧರ್ಮೇಂದ್ರ  ವಿರುದ್ಧ ಮೊಕದ್ದಮೆ ದಾಖಲಾಗಿದೆ.

ಮಾಜಿ ಸಂಸದರ ಸಹೋದರಿ, ಅನೇಕ ರಾಜಕೀಯ ನಾಯಕರ ಪರಿಚಯವಿದೆ ಎಂದು ವನಿತಾ ಅವರಿಗೆ ಐಶ್ವರ್ಯಾ ಗೌಡ, ಹಾಗೂ ಆಕೆಯ ಪತಿ ಹರೀಶ್ ನಂಬಿಸಿದ್ದಾರೆ. ನಂತರ ಸಾಲದ ರೂಪದಲ್ಲಿ ಚಿನ್ನ ಪಡೆದು ಆರಂಭದಲ್ಲಿ ಕೆಲ ಬಾರಿ ಹಣ ನೀಡಿದ್ದಾರೆ. ಆದರೆ 2023 ಅಕ್ಟೋಬರ್‌ನಿಂದ 2024 ಏಪ್ರಿಲ್‍ವರೆಗೆ ಹಂತ ಹಂತವಾಗಿ ಪಡೆದಿದ್ದ ಒಟ್ಟು 14 ಕೆ.ಜಿ 660 ಗ್ರಾಂ ಚಿನ್ನಕ್ಕೆ ಪ್ರತಿಯಾಗಿ ಹಣ ನೀಡದೆ ವಂಚನೆ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇನ್ನೂ, ಪದೇಪದೇ ಹಣ ವಾಪಾಸ್ ಕೇಳಿದಾಗ, ಧರ್ಮೇಂದ್ರ ಮೂಲಕ ಕರೆ ಮಾಡಿಸಿ ಸಂಸದರ ಧ್ವನಿಯಲ್ಲಿ ಮಾತನಾಡಿಸಿದ್ದಾರೆ. ಈ ವಿಷಯ ತಿಳಿದ ಬಳಿಕ ಐಶ್ವರ್ಯಾಗೆ ಕರೆ ಮಾಡಿ ಪಡೆದಿದ್ದ ಚಿನ್ನಕ್ಕೆ ಪ್ರತಿಯಾಗಿ ಹಣ ನೀಡುವಂತೆ ಕೇಳಿದಾಗ, ಹಣ ಕೇಳಿದರೆ ಧರ್ಮೇಂದ್ರನನ್ನು ಕಳುಹಿಸಿ ಕೊಲೆ ಮಾಡಿಸುವುದಾಗಿ ಬೆದರಿಸಿದ್ದಾರೆ ಎಂದು ವನಿತಾ ಅವರು ದೂರಿನಲ್ಲಿ ಆರೋಪಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News