×
Ad

ಕೆಪಿಎಸ್ ಸರಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ ಉಚಿತ ಸಾರಿಗೆ ಭಾಗ್ಯ: ರಾಜ್ಯ ಸರಕಾರದಿಂದ ಮಹತ್ವದ ಘೋಷಣೆ

Update: 2025-07-11 11:27 IST

ಡಿಸಿಎಂ ಡಿ.ಕೆ.ಶಿವಕುಮಾರ್ ಅವರು 'ಎಕ್ಸ್'ನಲ್ಲಿ ಮಾಡಿರುವ ಪೋಸ್ಟ್

ಬೆಂಗಳೂರು: ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆ(ಕೆಪಿಎಸ್)ಗಳಲ್ಲಿ ಎಲ್ ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸಾರಿಗೆ ವ್ಯವಸ್ಥೆ ಆರಂಭಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ.

ಈ ಬಗ್ಗೆ ತನ್ನ 'ಎಕ್ಸ್' ಖಾತೆಯಲ್ಲಿ ಮಾಹಿತಿ ನೀಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸರಕಾರಿ ಶಾಲೆಗಳ ಬಲವರ್ಧನೆಯ ನಿಟ್ಟಿನಲ್ಲಿ ಇದು ಪ್ರಮುಖ ಕ್ರಮ ಎಂದು ಹೇಳಿದ್ದಾರೆ.

ಸರಕಾರಿ ಶಾಲೆಯ ಮಕ್ಕಳ ಹಾಜರಾತಿ, ಗುಣಮಟ್ಟ ಹೆಚ್ಚಿಸಲು ರಾಜ್ಯ ಸರಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಕೆಪಿಎಸ್ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಅನುಕೂಲ ಕಲ್ಪಿಸಲು ಉಚಿತ ಬಸ್ ವ್ಯವಸ್ಥೆ ಆರಂಭಿಸಲಾಗುತ್ತಿದೆ. ಎಲ್ಕೆಜಿಯಿಂದ ಪಿಯುಸಿ ತನಕ ವಿದ್ಯಾಭ್ಯಾಸ ಮಾಡುವ ಸರಕಾರಿ ಶಾಲಾ ವಿದ್ಯಾರ್ಥಿಗಳು ಈ ಉಚಿತ ಬಸ್ ವ್ಯವಸ್ಥೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಡಿಸಿಎಂ ತಿಳಿಸಿದ್ದಾರೆ.

ಬಡವರ ಮಕ್ಕಳಿಗೆ ಶೈಕ್ಷಣಿಕವಾಗಿ, ಆರ್ಥಿಕವಾಗಿ ಬಲ ನೀಡಲು ಸರಕಾರದ ಮಹತ್ವದ ಚಿಂತನೆ ಇದಾಗಿದ್ದು, ಸರಕಾರಿ ಶಾಲೆಗಳ ಸಬಲೀಕರಣದ ನಿಟ್ಟಿನಲ್ಲಿ ಸರಕಾರ ದಿಟ್ಟ ಹೆಜ್ಜೆ ಇಟ್ಟಿದೆ ಎಂದು ಅವರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News