×
Ad

ಸುವರ್ಣ ಕರ್ನಾಟಕ ಭವನಕ್ಕೆ ಶೀಘ್ರದಲ್ಲೇ ಅನುದಾನ ಬಿಡುಗಡೆ: ಸಚಿವ ಶಿವರಾಜ್‌ ತಂಗಡಗಿ

Update: 2026-01-28 21:43 IST

ಬೆಂಗಳೂರು, ಜ.28: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಪಟ್ಟಣದ ಸುವರ್ಣ ಕನ್ನಡ ಭವನದ ಮುಂದುವರೆದ ಕಾಮಗಾರಿಗೆ ಅನುಮೋದಿತ ಮೊತ್ತಕ್ಕಿಂತ ಹೆಚ್ಚುವರಿ ಅನುದಾನ ಒದಗಿಸುವಂತೆ ಕೋರಲಾಗಿದ್ದು, ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದಾರೆ.

ಬುಧವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಕೃಷ್ಣಮೂರ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಶಿವರಾಜ ತಂಗಡಗಿ, ಕೊಳ್ಳೇಗಾಲದ ಸುವರ್ಣ ಕರ್ನಾಟಕ ಭವನ ಕಾಮಗಾರಿಯನ್ನು ಪೂರ್ಣಗೊಳಿಸಲು ಪರಿಸ್ಕೃತ ಅಂದಾಜು ಪಟ್ಟಿಯಂತೆ 186.49 ಲಕ್ಷಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಈಗಾಗಲೇ ಕಾಮಗಾರಿಗೆ ಬಿಡುಗಡೆಯಾಗಿರುವ 125 ಲಕ್ಷಗಳನ್ನು ಹೊರತುಪಡಿಸಿ ಬಾಕಿಯಿರುವ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.

ಹೆಚ್ಚುವರಿಯಾಗಿ 80 ಲಕ್ಷಗಳ ಹೆಚ್ಚುವರಿ ಅನುದಾನ ಒದಗಿಸುವಂತೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೂಡಲೇ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News