74.80 ಕೋಟಿ ರೂ.ಮೌಲ್ಯದ ಸರಕಾರಿ ಜಮೀನು ಒತ್ತುವರಿ ತೆರವು : ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್
ಬೆಂಗಳೂರು : ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ 74.80 ಕೋಟಿ ರೂ. ಅಂದಾಜು ಮೌಲ್ಯದ ಒಟ್ಟು 15 ಎಕರೆ 0.38 ಗುಂಟೆ ಸರಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದಲ್ಲಿ ತೆರವುಗೊಳಿಸಿ ಸರಕಾರದ ವಶಕ್ಕೆ ಪಡೆಯಲಾಯಿತು.
ಶುಕ್ರವಾರ ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗೋಮಾಳ, ಸ್ಮಶಾನ, ಸರಕಾರಿ ಒಣಿ, ಸರಕಾರಿ ಕುಂಟೆ, ಬಂಡಿದಾರಿ, ಸರಕಾರಿ ಕಟ್ಟೆ, ಗುಂಡುತೋಪು, ಖರಾಬು, ಕೆರೆ ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.
ಬೆಂಗಳೂರು ಪೂರ್ವ ತಾಲೂಕಿನ ವರ್ತೂರು ಹೋಬಳಿಯ ಬಳಗೆರೆ ಗ್ರಾಮದ ಸ.ನಂ. 65ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.18 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 5.50 ಕೋಟಿ ರೂ.ಗಳಾಗಿದೆ. ವರ್ತೂರು ಗ್ರಾಮದ ಸ.ನಂ.170ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 1.50 ಕೋಟಿ ರೂ.ಗಳಾಗಿದೆ.
ಆನೇಕಲ್ ತಾಲೂಕಿನ ಕಸಬಾ ಹೋಬಳಿಯ ಆನೇಕಲ್ ಗ್ರಾಮಾಂತರ ಸ.ನಂ.426, 427 ಮತ್ತು 428ರ ಮಧ್ಯದ ಓಣಿ, ಸರಕಾರಿ ಓಣಿ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 0.06 ಲಕ್ಷ ರೂ.ಗಳಾಗಿದೆ. ಅತ್ತಿಬೆಲೆ ಹೋಬಳಿಯ ಇಂಡ್ಲಬೆಲೆ ಗ್ರಾಮದ ಸ.ನಂ.60ರ ಸರಕಾರಿ ಕುಂಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.14 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 0.28 ಲಕ್ಷ ರೂ.ಗಳಾಗಿದೆ. ಸರ್ಜಾಪುರ ಹೋಬಳಿಯ ಹಾರೋಹಳ್ಳಿ ಗ್ರಾಮದ ಸ.ನಂ.64, 81 ಹಾಗೂ ಇತರೆ ಬಂಡಿದಾರಿ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.12 ಗುಂಟೆಗಳಾಗಿದ್ದು ಅಂದಾಜು ಮೌಲ್ಯ 0.80 ಲಕ್ಷ ರೂ.ಗಳಾಗಿದೆ.
ಬೆಂಗಳೂರು ದಕ್ಷಿಣ ತಾಲೂಕಿನ ಕೆಂಗೇರಿ ಹೋಬಳಿಯ ತಗಚಗುಪ್ಪೆ ಗ್ರಾಮದ ಸ.ನಂ.29 ರ ಸರಕಾರಿ ಕಟ್ಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.14 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 0.56 ಲಕ್ಷ ರೂ.ಗಳಾಗಿದೆ. ಕೆಂಗೇರಿ ಹೋಬಳಿಯ ಅಗರ ಗ್ರಾಮದ ಸ.ನಂ.14ರ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.10 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 0.50 ಲಕ್ಷ ರೂ.ಗಳಾದೆ.
ಉತ್ತರಹಳ್ಳಿ ಹೋಬಳಿಯ ಉತ್ತರಿ ಗ್ರಾಮದ ಸ.ನಂ.111ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 4 ಎಕರೆ 0.38 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 25 ಕೋಟಿ ರೂ.ಗಳಾಗಿದೆ. ತಾವರೆಕೆರೆ ಹೋಬಳಿಯ ಹುಲುವೇನಹಳ್ಳಿ ಗ್ರಾಮದ ಸ.ನಂ. 14/23ರ ಸರಕಾರಿ ಕಟ್ಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.04 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 0.10 ಲಕ್ಷ ರೂ.ಗಳಾಗಿದೆ.
ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಹೋಬಳಿಯ ಬೈಲುಕೋನೆನಹಳ್ಳಿ ಗ್ರಾಮದ ಸ.ನಂ.60ರ ಖರಾಬು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 5 ಎಕರೆ 0.20 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 30 ಕೋಟಿ ರೂ.ಗಳಾಗಿದೆ. ದಾಸನಪುರ ಹೋಬಳಿಯ ಮತ್ತಿಹಳ್ಳಿ ಗ್ರಾಮದ ಸ.ನಂ.40ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 1 ಎಕರೆ 0.20 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 5 ಕೋಟಿ ರೂ.ಗಳಾಗಿದೆ.
ಯಲಹಂಕ ತಾಲೂಕಿನ ಹೆಸರಘಟ್ಟ ಹೋಬಳಿಯ ಕಾಕೋಳು ಗ್ರಾಮದ ಸ.ನಂ.44ರ ಕೆರೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 1 ಎಕರೆ 0.38 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 5.50 ಕೋಟಿ ರೂ.ಗಳಾಗಿದೆ. ಈ ಸಂದರ್ಭದಲ್ಲಿ ಬೆಂಗಳೂರು ನಗರದ ವಿವಿಧ ತಾಲೂಕಿನ ತಹಶೀಲ್ದಾರ್‍ಗಳು ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು, ಉಪಸ್ಥಿತರಿದ್ದರು.