Bengaluru | ಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಉದ್ಯಮಿ ಗೌತಮ್ ಅದಾನಿ ಭೇಟಿ
Update: 2026-08-23 13:30 IST
ಬೆಂಗಳೂರು: ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಗೌತಮ್ ಅದಾನಿ ರವಿವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಕನಕಪುರದಲ್ಲಿರುವ ಆರ್ಟ್ ಆಫ್ ಲಿವಿಂಗ್ ಗೆ ಆಗಮಿಸಿದ್ದ ಗೌತಮ್ ಅದಾನಿ ಅಲ್ಲಿಂದ ಹಿಂದಿರುಗುವ ವೇಳೆ ಸದಾಶಿವ ನಗರದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದರು.
ಸುಮಾರು 20 ನಿಮಿಷಗಳ ಕಾಲ ಅದಾನಿ ಮತ್ತು ಡಿಕೆ ಶಿವಕುಮಾರ್ ಮಾತುಕತೆ ನಡೆಸಿದರು.