ಬೆಂಗಳೂರು : 2026-27ನೇ ಸಾಲಿನ ಗೆಜೆಟೆಡ್ ಪ್ರೋಬೆಷನರಿ ಪೂರ್ವಭಾವಿ ಪರೀಕ್ಷೆಯು 15 ಜಿಲ್ಲಾ ಕೇಂದ್ರಗಳು, 345 ಜಿಲ್ಲಾ ಉಪ ಕೇಂದ್ರಗಳಲ್ಲಿ ರವಿವಾರ ಯಶಸ್ವಿಯಾಗಿ ನಡೆಸಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗ ತಿಳಿಸಿದೆ.

ಒಟ್ಟು 6,192 ಪರೀಕ್ಷಾ ಕೊಠಡಿಗಳಲ್ಲಿ ನಡೆದ ಗೆಜೆಟೆಡ್ ಪ್ರೋಬೆಷನರಿ ಪೂರ್ವಭಾವಿ ಪರೀಕ್ಷೆಯ ಮೊದಲ ಅಧಿವೇಶನದಲ್ಲಿ 88,450 ಅಭ್ಯರ್ಥಿಗಳು ಹಾಗೂ ಎರಡನೇ ಅಧಿವೇಶನದಲ್ಲಿ 87,817 ಅಭ್ಯರ್ಥಿಗಳು ಹಾಜರಾಗಿದ್ದರು.

ಬೆಂಗಳೂರಿನಲ್ಲಿ ಮೊದಲ ಅಧಿವೇಶನದಲ್ಲಿ 18,865 ಅಭ್ಯರ್ಥಿಗಳು ಹಾಗೂ ಎರಡನೇ ಅಧಿವೇಶನದಲ್ಲಿ 18,728 ಅಭ್ಯರ್ಥಿಗಳು ಹಾಜರಾಗಿದ್ದರು. ಜು.31ರಂದು ಅಧಿಸೂಚನೆ ಹೊರಡಿಸಲಾಗಿದ್ದು, ಒಟ್ಟು 1,47,067 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಅದರಲ್ಲಿ 1,14,406 ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‍ಲೋಡ್ ಮಾಡಿಕೊಂಡಿದ್ದರು ಎಂದು ಪ್ರಕಟಣೆ ತಿಳಿಸಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor