×
Ad

GBA | ಅಪಾಯಕಾರಿ ಮರದ ಕೊಂಬೆಗಳ ತೆರವಿಗೆ ಸಿಎಂ ಸೂಚನೆ

Update: 2026-06-30 19:14 IST

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ)ವ್ಯಾಪ್ತಿಯಲ್ಲಿನ ಅಪಾಯಕಾರಿ ಮರಗಳು ಮತ್ತು ಮರದ ಕೊಂಬೆಗಳನ್ನು ಗುರುತಿಸಿ ತೆರವು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಸೂಚನೆ ನೀಡಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿ ಅಪಾಯಕಾರಿಯಾಗಿರುವ ಮರಗಳು ಮತ್ತು ಕೊಂಬೆಗಳನ್ನು ಗುರುತಿಸಿ, ಕೂಡಲೇ ತೆರವು ಮಾಡಬೇಕು. ಅಲ್ಲದೆ, ಅವಘಡಗಳನ್ನು ತಪ್ಪಿಸಲು ತುರ್ತಾಗಿ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಜಿಬಿಎ ವ್ಯಾಪ್ತಿಯಲ್ಲಿ ಒಣಗಿರುವ ಹಾಗೂ ಅಪಾಯದ ಸ್ಥಿತಿಯಲ್ಲಿರುವ ಮರಗಳು ಮತ್ತು ಕೊಂಬೆಗಳನ್ನು ತೆರವುಗೊಳಿಸುವ ಕುರಿತು ಈಗಾಗಲೇ ಸ್ಪಷ್ಟ ಸೂಚನೆ ನೀಡಲಾಗಿದ್ದರೂ, ಅದರ ಪರಿಣಾಮಕಾರಿ ಅನುಷ್ಠಾನವಾಗದ ಹಿನ್ನೆಲೆಯಲ್ಲಿ ಮಳೆ-ಗಾಳಿಯಿಂದ ಮರಗಳು ಹಾಗೂ ಕೊಂಬೆಗಳು ಬಿದ್ದು ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಾಯಿ ಸಮಿತಿ ಸದಸ್ಯರು ಸಿಎಂ ಗಮನಕ್ಕೆ ತಂದರು.

ಇತ್ತೀಚೆಗೆ ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ ಬೈಕ್ ಸವಾರ ಸುರೇಶ್(50) ಎಂಬವರ ಮೇಲೆ ಮರದ ಕೊಂಬೆಯೊಂದು ಬಿದ್ದು, ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

 

‘ಮೇಕೆದಾಟು ಅಣೆಕಟ್ಟು ಯೋಜನೆಗೆ ಸಣ್ಣ-ಪುಟ್ಟ ವಿಚಾರಗಳ ನೆಪಗಳನ್ನು ಮುಂದಿಟ್ಟು ಸುಪ್ರೀಂ ಕೋರ್ಟ್‍ನಲ್ಲಿ ತಕರಾರು ಅರ್ಜಿ ಸಲ್ಲಿಸಲು ತಮಿಳುನಾಡು ರಾಜ್ಯವು ಪ್ರಯತ್ನಿಸುತ್ತಿದೆ. ಆ ಸಣ್ಣ-ಪುಟ್ಟ ತಾಂತ್ರಿಕ ಸಮಸ್ಯೆಗಳು ಇವೆಯೇ? ಎಂದು ಪರಿಶೀಲಿಸಿ ಕೂಡಲೇ ಅವುಗಳನ್ನು ಬಗೆಹರಿಸಬೇಕು’ ಎಂದು ಸಿಎಂ ಡಿ.ಕೆ.ಶಿವಕುಮಾರ್, ಅಧಿಕಾರಿಗಳಿಗೆ ಸೂಚನೆ ನೀಡಿದರು.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News