×
Ad

ಬೆಂಗಳೂರು| ಅನೈತಿಕ ಪೊಲೀಸ್‍ಗಿರಿ ಆರೋಪ: ನಾಲ್ವರ ಬಂಧನ

Update: 2025-04-11 18:08 IST

ಸಾಂದರ್ಭಿಕ ಚಿತ್ರ 

ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಕುಳಿತಿರುವಾಗ ಭಿನ್ನ ಕೋಮಿನ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಅವಾಚ್ಯ ಶಬ್ಧಗಳಿಂದ ನಿಂದಿಸಿ ಅನೈತಿಕ ಪೊಲೀಸ್ ಗಿರಿ ನಡೆಸಿದ್ದ ಆರೋಪದಡಿ ನಾಲ್ವರನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಯುವತಿ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಹೀನ್, ಮನ್ಸೂರ್, ಅಫ್ರಿದಿ ಪಾಷಾ ಹಾಗೂ ವಾಸೀಂ ಖಾನ್ ಎಂಬವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಚಂದ್ರಾಲೇಔಟ್ ಪಾರ್ಕ್‍ವೊಂದರ ಬಳಿ ಇನ್ನೊಂದು ಕೋಮಿನ ವಿದ್ಯಾರ್ಥಿಯೊಂದಿಗೆ ವಿದ್ಯಾರ್ಥಿನಿ ಸ್ಕೂಟರ್ ಮೇಲೆ ಕುಳಿತು ಮಾತನಾಡುತ್ತಿದ್ದರು. ಈ ವೇಳೆ ಬಂದ ಆರೋಪಿಗಳು ಅವರನ್ನು ಪ್ರಶ್ನಿಸಿದ್ದಾರೆ. ನಾವಿಬ್ಬರು ಸ್ನೇಹಿತರೆಂದು ಸಮಜಾಯಿಷಿ ನೀಡಿದರೂ ಮಾತು ಕೇಳದ ಆರೋಪಿಗಳು ಅವಾಚ್ಯ ಶಬ್ಧಗಳಿಂದ ನಿಂದಿಸಿ ಅನೈತಿಕ ಪೊಲೀಸ್ ಗಿರಿ ಮೆರೆದಿರುವುದಾಗಿ ಯುವತಿ ದೂರು ನೀಡಿದ್ದಾಳೆ.

ಈ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ. ಆರೋಪಿತರೆಲ್ಲರೂ ಚಂದ್ರಾಲೇಔಟ್ ಠಾಣಾ ವ್ಯಾಪ್ತಿ ನಿವಾಸಿಗಳಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News