×
Ad

ಸರಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣ: ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಎಸ್ ಐಟಿ ತನಿಖೆಗೆ ಹೈಕೋರ್ಟ್ ತಡೆ

Update: 2025-06-19 13:13 IST

ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿಯ ಕೇತಗಾನಹಳ್ಳಿ ಬಳಿ ಸರಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣದಲ್ಲಿ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಎಸ್ ಐಟಿ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿದೆ.

ಪ್ರಕರಣದ ತನಿಖೆಗೆ ರಾಜ್ಯ ಸರಕಾರ ಎಸ್ ಐಟಿ ರಚಿಸಿತ್ತು. ಇದನ್ನು ಪ್ರಶ್ನಿಸಿ ಎಚ್.ಡಿ.ಕುಮಾರಸ್ವಾಮಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಈ ತಡೆ ನೀಡಿ ಆದೇಶಿದೆ.

ವಿಚಾರಣೆ ವೇಳೆ ಅಧಿಸೂಚನೆಯಿಲ್ಲದೆ ಎಸ್ಐಟಿ ರಚನೆ ಕಾನೂನುಬಾಹಿರ, ಎಸ್ಐಟಿಯ ಕ್ರಮಗಳನ್ನು ಅನೂರ್ಜಿತವೆಂದು ಘೋಷಿಸಲು ಕುಮಾರಸ್ವಾಮಿ ಪರ ಹಿರಿಯ ವಕೀಲ ಉದಯ್ ಹೊಳ್ಳ, ಎ.ವಿ. ನಿಶಾಂತ್ ವಾದ ಮಂಡಿಸಿದರು.

ವಾದ ಆಲಿಸಿದ ನ್ಯಾಯಮೂರ್ತಿ. ಇ.ಎಸ್.ಇಂದಿರೇಶ್ ಅವರಿದ್ದ ಏಕಸದಸ್ಯ ಪೀಠ ತಡೆ ನೀಡಿ ಆದೇಶಿಸಿದೆ.

ಸರಕಾರ ಜಮೀನು ಒತ್ತುವರಿ ಪತ್ತೆಗೆ ಕಳೆದ ಜನವರಿಯಲ್ಲಿ ಐಎಎಸ್ ಅಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ಎಸ್ಐಟಿ ರಚನೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿತ್ತು. ಆರು ಎಕರೆ ಒತ್ತುವರಿ ತೆರವುಗೊಳಿಸುವಂತೆ ತಹಶೀಲ್ದಾರ್ ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಹೈಕೋರ್ಟ್ ಮೊರೆ ಹೋಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News