ಸಾಂದರ್ಭಿಕ ಚಿತ್ರ | PC : Gemini AI

ಬೆಂಗಳೂರು : ರಾಜ್ಯದ ನಾಲ್ಕು ಸರಕಾರಿ ರಸ್ತೆ ಸಾರಿಗೆ ನಿಗಮಗಳ ಡಿಸೇಲ್ ಬಾಕಿ ಮೊತ್ತವನ್ನು ಪಾವತಿಸಲು ರಾಜ್ಯ ಸರಕಾರ ಒಟ್ಟು 100 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

2026-27ನೆ ಸಾಲಿನ ಬಜೆಟ್ ಹಂಚಿಕೆಯಡಿ ಈ ಅನುದಾನ ಬಳಕೆಗೆ ಸರಕಾರ ಅನುಮತಿ ನೀಡಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)-62.53 ಕೋಟಿ ರೂ., ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಸಾರ್ಟಿಸಿ)-18.90 ಕೋಟಿ ರೂ., ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ)-10.61 ಕೋಟಿ ರೂ., ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್‍ಡಬ್ಲ್ಯುಕೆಆರ್ ಟಿಸಿ)-7.96 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.

ಬಿಡುಗಡೆಯಾಗಿರುವ ಅನುದಾನವನ್ನು ಸಂಪೂರ್ಣವಾಗಿ ಡೀಸೆಲ್ ಬಾಕಿ ಪಾವತಿಗೆ ಮಾತ್ರವೇ ಬಳಸಬೇಕು ಹಾಗೂ ಸರಕಾರದ ನಿರ್ದಿಷ್ಟ ನಿಯಮ ಮತ್ತು ಷರತ್ತುಗಳಿಗೆ ಒಳಪಟ್ಟು ವಿನಿಯೋಗಿಸಬೇಕು ಎಂದು ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಆದೇಶದಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor