ಬೆಂಗಳೂರು : ಕನ್ನಡದಲ್ಲಿ ವೈದ್ಯಕೀಯ ಸಾಹಿತ್ಯ ಪರಂಪರೆ ಉಳಿಸುವ ಪ್ರಯತ್ನಕ್ಕೆ ನಮ್ಮ ಸರಕಾರದ ಬೆಂಬಲವಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯದ ವತಿಯಿಂದ ಆಯೋಜಿಸಿರುವ 2ನೇ ಕನ್ನಡ ವೈದ್ಯಕೀಯ ಸಾಹಿತ್ಯ ಸಮ್ಮೇಳನ 2026ರ ಕಿರು ಹೊತ್ತಿಗೆ ಮತ್ತು ಲಾಂಛನವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಕನ್ನಡ ನಮ್ಮೆಲ್ಲರ ಬದುಕು. ಕನ್ನಡವನ್ನು ಉಳಿಸಲು ನಾಡಿನ ಜನ ಹೋರಾಡುತ್ತಿದ್ದಾರೆ. ಕನ್ನಡದಲ್ಲಿ ವೈದ್ಯಕೀಯ ಸಾಹಿತ್ಯಕ್ಕೆ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ. ನಮ್ಮ ನಾಡ ಭಾಷೆ, ಸಂಸ್ಕೃತಿ ಕಾಪಾಡಿ, ವೈದ್ಯರು, ದಾದಿಯರು ಕನ್ನಡವನ್ನು ಬಳಸುವ ಪ್ರಯತ್ನ ಮಾಡಬೇಕು. ಸರಕಾರ ವೈದ್ಯಕೀಯ ಮತ್ತು ತಾಂತ್ರಿಕ ಶಿಕ್ಷಣದಲ್ಲಿ ಕನ್ನಡವನ್ನು ಬಳಸುವ ಪ್ರಯತ್ನಕ್ಕೆ ಎಲ್ಲ ಹಿರಿಯ ವೈದ್ಯರಿಗೆ ಶುಭ ಹಾರೈಸುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor