ಸುಧಾ ಯಾದವ್ | Photo Credit : Dr. Sudha Yadav \facebook

ಬೆಂಗಳೂರು : ಕರ್ನಾಟಕ ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕಗೊಂಡಿರುವ ಹರ್ಯಾಣ ಮೂಲದ ಸುಧಾ ಯಾದವ್ ಅವರು ಅ.16ರಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಬೆಂಗಳೂರಿನ ಲೋಕಭವನದಲ್ಲಿ ಅ.16ರ ಬೆಳಗ್ಗೆ 10ಗಂಟೆಗೆ ಏರ್ಪಡಿಸಿರುವ ಸರಳ ಸಮಾರಂಭದಲ್ಲಿ ನೂತನ ರಾಜ್ಯಪಾಲರಾದ ಸುಧಾ ಯಾದವ್ ಅವರಿಗೆ ಕರ್ನಾಟಕ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಪ್ರಮಾಣ ವಚನ ಬೋಧನೆ ಮಾಡಲಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಿಕಟಪೂರ್ವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಂಪುಟ ಸಚಿವರು, ಶಾಸಕರು, ಪ್ರತಿಪಕ್ಷಗಳ ನಾಯಕರು ಸೇರಿದಂತೆ ಇನ್ನಿತರರು ಉಪಸ್ಥಿತರಿರಲಿದ್ದಾರೆ ಎಂದು ತಿಳಿದು ಬಂದಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor