×
Ad

ಝಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ನಿರಾಕರಣೆ

IMA ಹಾಗೂ ಅಕ್ರಮ ಆಸ್ತಿ ಪ್ರಕರಣ: ತಾಂತ್ರಿಕ, ಕಾನೂನು ಕಾರಣ ಉಲ್ಲೇಖಿಸಿ ಲೋಕಾಯುಕ್ತಕ್ಕೆ ಕಡತ ವಾಪಸ್

Update: 2026-07-15 12:36 IST

ಝಮೀರ್ ಅಹ್ಮದ್ ಖಾನ್, ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು : ಮಾಜಿ ಸಚಿವ ಝಮೀರ್ ಅಹ್ಮದ್ ಖಾನ್ ವಿರುದ್ಧದ IMA ಹಗರಣ ಹಾಗೂ ಅಕ್ರಮ ಆಸ್ತಿಗಳಿಕೆ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಕೋರಿ ಲೋಕಾಯುಕ್ತ ಸಲ್ಲಿಸಿದ್ದ ಮನವಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿರಸ್ಕರಿಸಿದ್ದಾರೆ.

ತಾಂತ್ರಿಕ ಹಾಗೂ ಕಾನೂನಾತ್ಮಕ ಕಾರಣಗಳನ್ನು ಉಲ್ಲೇಖಿಸಿ ಈ ಸಂಬಂಧದ ಕಡತವನ್ನು ರಾಜ್ಯಪಾಲರು ಲೋಕಾಯುಕ್ತಕ್ಕೆ ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಕುರಿತ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಈ ನಿರ್ಧಾರ ಹೊರಬಿದ್ದಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ರಾಜ್ಯಪಾಲರ ಈ ನಿರ್ಧಾರದಿಂದ ಝಮೀರ್ ಅಹ್ಮದ್ ಖಾನ್ ವಿರುದ್ಧ ಲೋಕಾಯುಕ್ತ ಮುಂದಿಟ್ಟಿದ್ದ ಕಾನೂನು ಪ್ರಕ್ರಿಯೆಗೆ ಸದ್ಯಕ್ಕೆ ಹಿನ್ನಡೆಯಾದಂತಾಗಿದೆ.







Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News