ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಆತ್ಮೀಯವಾಗಿ ಬೀಳ್ಕೊಟ್ಟ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಬೆಂಗಳೂರು, ಆ.30 : ರಾಮಕೃಷ್ಣ ಹೆಗಡೆ ಅವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಆ.29 ರಂದು ಬೆಂಗಳೂರಿಗೆ ಆಗಮಿಸಿದ್ದ ಭಾರತದ ಗೌರವಾನ್ವಿತ ಉಪ ರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಅವರನ್ನು ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಆ.30 ರಂದು ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬೀಳ್ಕೊಟ್ಟರು.
ಈ ಸಂದರ್ಭದಲ್ಲಿ, ರಾಜ್ಯಸಭಾ ಸದಸ್ಯರಾದ ಲೆಹರ್ ಸಿಂಗ್ ಸಿರೋಯಾ, ಮಾನ್ಯ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ರಿಜ್ವಾನ್ ಅರ್ಷದ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ್ ಗುಪ್ತ, ಕರ್ನಾಟಕ ಪೊಲೀಸ್ ಮಹಾನಿರ್ದೇಶಕರು ಮತ್ತು ನಿರೀಕ್ಷಕರಾದ ಡಾ. ಎಂ.ಎ. ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕಾಂತರಾಜು ಪಿ.ಎಸ್ ಸೇರಿದಂತೆ ಗಣ್ಯರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಉಪರಾಷ್ಟ್ರಪತಿಗಳು ವಾಯುಸೇನೆಯ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಕೊಚಿನ್ ಗೆ ಪ್ರಯಾಣಿಸಿದರು.