×
Ad

ಸಂಸದ ಗೋವಿಂದ ಕಾರಜೋಳ ಆಯ್ಕೆ ಅಸಿಂಧು ಕೋರಿದ್ದ ಅರ್ಜಿ ವಜಾ

Update: 2025-11-13 22:58 IST

ಗೋವಿಂದ ಕಾರಜೋಳ 

ಬೆಂಗಳೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ಚಿತ್ರದುರ್ಗ ಮೀಸಲು ಕ್ಷೇತ್ರದಿಂದ ಸಂಸದರಾಗಿ ಚುನಾಯಿತರಾ‍ಗಿರುವ ಗೋವಿಂದ ಕಾರಜೋಳ ಅವರ ಆಯ್ಕೆ ಅಸಿಂಧು ಕೋರಿ ಸಲ್ಲಿಸಲಾಗಿದ್ದ ಚುನಾವಣಾ ತಕರಾರು ಅರ್ಜಿ ವಜಾಗೊಂಡಿದೆ.

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಉಮೇದುವಾರಿಕೆ ಸಲ್ಲಿಸಿ ನಾಮಪತ್ರ ತಿರಸ್ಕೃತಗೊಂಡಿದ್ದ ವಿ.ಎಸ್. ಮಂಜುನಾಥ್ ಸಲ್ಲಿಸಿದ್ದ ಚುನಾವಣಾ ತಕಾರರು ಅರ್ಜಿಯನ್ನು ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲರು ಹಾಜರಾಗಿ, ಪ್ರಜಾಪ್ರತಿನಿಧಿ ಕಾಯ್ದೆ-1951ರ ಸೆಕ್ಷನ್ 109ರಲ್ಲಿ ಅವಕಾಶವಿರುವಂತೆ ಚುನಾವಣಾ ತಕರಾರು ಅರ್ಜಿಯನ್ನು ವಾಪಸ್ ಪಡೆದುಕೊಳ್ಳುತ್ತಿರುವುದಾಗಿ ನ್ಯಾಯಾಲಯಕ್ಕೆ ಮೆಮೋ ಸಲ್ಲಿಸಿದರು.

ಇದನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿ ಹಿಂಪಡೆದುಕೊಳ್ಳುತ್ತಿರುವ ಬಗ್ಗೆ ಸ್ವತ: ಅರ್ಜಿದಾರರ ಪರ ವಕೀಲರು ನ್ಯಾಯಾಲಯಕ್ಕೆ ಲಿಖಿತ ಹೇಳಿಕೆ ಸಲ್ಲಿಸಿದ್ದರಿಂದ ಅರ್ಜಿಯನ್ನು ವಜಾಗೊಳಿಸಲಾಗುತ್ತಿದೆ ಎಂದು ಆದೇಶಿಸಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News