ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನತೆ | ಸ್ಲೀಪರ್ ಸೆಲ್‌ಗಳ ಮೇಲೂ ನಿಗಾ : ಜಿ.ಪರಮೇಶ್ವರ್
Update: 2025-05-09 21:08 IST
ಬೆಂಗಳೂರು : ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ಹಿನ್ನೆಲೆ ರಾಜ್ಯದಲ್ಲಿರುವ ದಾಳಿಕೋರರ ಸ್ಲೀಪರ್ ಸೆಲ್‌ಗಳ ಮೇಲೆ ನಿಗಾ ಇಡುವಂತೆ ಕೇಂದ್ರ ಸರಕಾರ ಸೂಚನೆ ನೀಡಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಭಾರತದ ರಾಜ್ಯಗಳಿಗೆ ಕೊಟ್ಟಿರುವ ಸೂಚನೆಗಳನ್ನೇ ನಮಗೂ ಕೇಂದ್ರ ಕೊಟ್ಟಿದೆ. ಈ ಸಂಬಂಧ ಆರಂಭದಿಂದಲೂ ಎಲ್ಲ ಜಿಲ್ಲೆಗಳ ಎಸ್ಪಿಗಳಿಗೆ ಸೂಚನೆ ಕೊಡಲಾಗಿದೆ. ಮಾಹಿತಿ ಸಂಗ್ರಹಿಸಲು ತಿಳಿಸಲಾಗಿದ್ದು, ಸ್ಲೀಪರ್ ಸೆಲ್‌ಗಳ ಮೇಲೂ ನಿಗಾ ಇಡಲು ತಿಳಿಸಲಾಗಿದೆ ಎಂದು ತಿಳಿಸಿದರು.