ಸಾಂದರ್ಭಿಕ ಚಿತ್ರ

ಬೆಂಗಳೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಉತ್ಸವದ ಅಂಗವಾಗಿ ಆಯೋಜಿಸಿರುವ ‘ರೈತ ದಸರಾ’ ಆಚರಣೆಯು ಅ.16ರಿಂದ 18ರ ವರೆಗೆ ವೈಭವದಿಂದ ಜರುಗಲಿದ್ದು, ಅ.16ರ ಬೆಳಗ್ಗೆ 9.30ಕ್ಕೆ ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಾಲಯದಿಂದ ರೈತ ದಸರಾ ಮೆರವಣಿಗೆ ಆರಂಭವಾಗಲಿದೆ. ರೈತ ದಸರಾವನ್ನು ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಉದ್ಘಾಟಿಸಲಿದ್ದಾರೆ.

ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ, ಪಶು ಸಂಗೋಪನೆ ಸಚಿವ ಸಿ.ಪುಟ್ಟರಂಗಶೆಟ್ಟಿ, ಮಾಜಿ ಸಿಎಂ ಸಿದ್ದರಾಮಯ್ಯ ಉಪಸ್ಥಿತರಿರುತ್ತಾರೆ. ಅದೇ ದಿನ ಬೆಳಗ್ಗೆ 11ಕ್ಕೆ ನಡೆಯುವ ಕೃಷಿ ವಸ್ತು ಪ್ರದರ್ಶನ ಉದ್ಘಾಟನೆ ಪಶು ಸಂಗೋಪನಾ ಸಚಿವ ಸಿ.ಪುಟ್ಟರಂಗಶೆಟ್ಟಿ ನೆರವೇರಿಸಲಿದ್ದಾರೆ.

ಬೆಳಗ್ಗೆ 11.15ಕ್ಕೆ ನಡೆಯುವ ರೈತ ದಸರಾ ವೇದಿಕೆ ಕಾರ್ಯಕ್ರಮವನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೃಷಿ ಸಚಿವರಾದ ಪಿ.ಎಂ.ನರೇಂದ್ರಸ್ವಾಮಿ ಹಾಗೂ ಸಿ.ಪುಟ್ಟರಂಗಶೆಟ್ಟಿ ಭಾಗವಹಿಸಲಿದ್ದಾರೆ.

ಅ.17ರಂದು ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆ ನಡೆಯಲಿದೆ. ಬೆಳಗ್ಗೆ 6.30ಕ್ಕೆ ಜೆ.ಕೆ.ಗ್ರೌಂಡ್ಸ್ ನಲ್ಲಿ ಹಾಲು ಕರೆಯುವ ಸ್ಪರ್ಧೆಯನ್ನು ಪಶು ಸಂಗೋಪನೆ ಸಚಿವ ಸಿ.ಪುಟ್ಟರಂಗಶೆಟ್ಟಿ ಉದ್ಘಾಟಿಸಲಿದ್ದಾರೆ. ಸಂಜೆ 5.30ಕ್ಕೆ ಹಾಲು ಕರೆಯುವ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಇರಲಿದೆ. ಅ.18 ರಂದು ಶ್ವಾನ ಪ್ರದರ್ಶನ ಸ್ಪರ್ಧೆ ಇರಲಿದೆ. ಕಾರ್ಯಕ್ರಮವನ್ನು ಪಶು ಸಂಗೋಪನಾ ಸಚಿವ ಸಿ.ಪುಟ್ಟರಂಗ ಶೆಟ್ಟಿ ಉದ್ಘಾಟಿಸಲಿದ್ದಾರೆ. ಸಂಜೆ 5.30ಕ್ಕೆ ನಡೆಯುವ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor