ಬೆಂಗಳೂರು : ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನಲ್ಲಿರುವ ಕಾವೇರಿ ವನ್ಯಜೀವಿಧಾಮದ ಮರಿಯಮಂಗಲ ಬೀಟ್‌ನಲ್ಲಿ ಆಗಷ್ಟ್ 15 ರ ಮುಂಜಾನೆ ನಡೆದಿರುವ ಶೂಟೌಟ್ ಪ್ರಕರಣದ ಬಿಜೆಪಿ ನಡೆಸಿದ ಸತ್ಯ ಶೋಧನಾ ವರದಿಯನ್ನು ಸೋಮವಾರ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಸಲ್ಲಿಸಲಾಯಿತು.

ಮರಿಯಮಂಗಲ ಬೀಟ್‌ನಲ್ಲಿ ನಡೆದಿರುವ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ರಾಜ್ಯಾಧ್ಯಕ್ಷರು ನಿಯೋಜಿಸಿದ್ದ ಸತ್ಯಶೋಧನಾ ಸಮಿತಿಯು, ಶೂಟೌಟ್‌ನಲ್ಲಿ ಮೃತಪಟ್ಟ ಮೂವರ ಕುಟುಂಬದ ಸದಸ್ಯರನ್ನು, ಪೊಲೀಸ್, ಅರಣ್ಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳನ್ನು ಹಾಗೂ ಗ್ರಾಮಸ್ಥರನ್ನು ಖುದ್ದಾಗಿ ಭೇಟಿ ಮಾಡಿ ಮಾಹಿತಿ ಸಂಗ್ರಹಿಸಿತು.

ಈ ವೇಳೆ ಮಹತ್ವದ ದಾಖಲೆಗಳನ್ನು ಸಂಗ್ರಹಿಸಲಾಗಿದೆ ಎಂದು ಹೇಳಿಕೊಂಡಿರುವ ಬಿಜೆಪಿಯ ಮುಖಂಡರುಗಳು ವರದಿಯನ್ನು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಖುದ್ದಾಗಿ ಸಲ್ಲಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor