×
Ad

ದ್ವೇಷ ಭಾಷಣ : ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್ ದಾಖಲು

Update: 2024-03-21 17:13 IST

ಬೆಂಗಳೂರು: ನಗರ್ತಪೇಟೆಯಲ್ಲಿ ಇತ್ತೀಚೆಗೆ ಯುವಕರ ನಡುವೆ ನಡೆದಂತಹ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದ್ವೇಷ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಬೆಂಗಳೂರು ಚುನಾವಣಾಧಿಕಾರಿ ಮಾ.21ರಂದು ನಗರದ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಜಾಪ್ರತಿನಿಧಿ ಕಾಯ್ದೆಯ 123 (3ಎ), 125 ಮತ್ತು 123 (3) ರ ಅಡಿ ಕೇಂದ್ರ ಸಚಿವೆ ಮತ್ತು ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಟ್ವೀಟ್ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News