ಎಚ್.ಸಿ.ಬಾಲಕೃಷ್ಣ

ಬೆಂಗಳೂರು: ಪೌರಾಡಳಿತ ಸಚಿವ ಎಚ್.ಸಿ.ಬಾಲಕೃಷ್ಣ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಮಾತನಾಡುವ ಮೊದಲು ತಾವರೆಕೆರೆ ಬಳಿಯ ಕುರುಬರಹಳ್ಳಿಯಲ್ಲಿ 36 ಎಕರೆ ಜಮೀನನ್ನು ಕಬಳಿಸಿದ್ದಾರೆ. ಈ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿ ವಿಚಾರಣೆಗೆ ಅನುಮತಿ ನೀಡುವಂತೆ ಮನವಿ ಮಾಡುತ್ತೇವೆ ಎಂದು ಮಾಜಿ ಶಾಸಕ ಎ.ಮಂಜುನಾಥ್ ಹೇಳಿದರು.

ಗುರುವಾರ ಜೆಡಿಎಸ್ ಕೇಂದ್ರ ಕಚೇರಿ ಜೆ.ಪಿ.ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಿದರಲ್ಲವೇ ಬಡವರಿಗೆ ಹಂಚಿಕೆ ಆಗಬೇಕಿದ್ದ ಸರಕಾರಿ ಭೂಮಿಯನ್ನು ರಾಜಕೀಯ ಪ್ರಭಾವ ಬಳಸಿ ಬಾಲಕೃಷ್ಣ ತಮ್ಮ ಪತ್ನಿ ರಮಾ ಬಾಲಕೃಷ್ಣರ ಹೆಸರಿಗೆ ಮಾಡಿಕೊಂಡಿದ್ದಾರೆ. ಕೇವಲ 15 ದಿನಗಳ ಹಿಂದೆ ಆ ಭೂಮಿಯನ್ನು ಇನ್ನೊಬ್ಬರ ಹೆಸರಿಗೆ ಮಾಡಿದ್ದಾರೆ ಎಂದು ಆರೋಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor