ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ಆಸ್ಪತ್ರೆಗೆ ದಾಖಲು
Update: 2026-07-16 10:13 IST
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚನ್ನಮ್ಮ ದೇವೇಗೌಡರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಂಡುಬಂದಿದ್ದು, ಅವರನ್ನು ಬುಧವಾರ ರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂಲಗಳ ಮಾಹಿತಿಯ ಪ್ರಕಾರ, ಚನ್ನಮ್ಮ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆತರಲಾಗಿದ್ದು, ಸದ್ಯ ತಜ್ಞ ವೈದ್ಯರ ತಂಡದ ನಿಗಾದಲ್ಲಿ ಚಿಕಿತ್ಸೆ ಮುಂದುವರಿದಿದೆ.
ವಿಷಯ ತಿಳಿಯುತ್ತಿದ್ದಂತೆ ದೇವೇಗೌಡರ ಕುಟುಂಬದ ಪ್ರಮುಖ ಸದಸ್ಯರು ಆಸ್ಪತ್ರೆಗೆ ಧಾವಿಸಿದ್ದಾರೆ.