ದಸರಾ ಉತ್ಸವದಲ್ಲಿ ‘ಕಂಬಳ’ವನ್ನು ಸೇರಿಸುವ ಅಗತ್ಯವಿಲ್ಲ : ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು : ‘ಪರಂಪರಾಗತವಾಗಿ ತನ್ನದೇ ಆದ ವೈಶಿಷ್ಟ್ಯದಿಂದ ಕಂಗೊಳಿಸುತ್ತಿರುವ ಮೈಸೂರು ದಸರಾ ಉತ್ಸವದಲ್ಲಿ ‘ಕಂಬಳ’ವನ್ನು ಸೇರಿಸುವ ಅಗತ್ಯವಿಲ್ಲ. ಈವರೆಗೂ ನಡೆದುಕೊಂಡು ಬಂದಿರುವ ದಸರಾಕ್ಕೆ ಧಕ್ಕೆ ತರುವ ಪ್ರಯತ್ನ ಖಂಡಿತ ಬೇಡ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ಷೇಪಿಸಿದ್ದಾರೆ.
ಶನಿವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ‘ಕಂಬಳವು ಕರಾವಳಿ ಭಾಗದ ಸಾಂಸ್ಕೃತಿಕ ಶ್ರೇಷ್ಠತೆ ಮತ್ತು ನಂಬಿಕೆಯ ಪ್ರತೀಕ. ಭೌಗೋಳಿಕವಾಗಿ ಆ ಭಾಗಕ್ಕೆ ಮಾತ್ರ ಸರಿಹೊಂದುವ ಆಚರಣೆಯೂ ಹೌದು. ಅದನ್ನು ಮೈಸೂರಿಗೆ ತಂದು ದೈವಿಕ ಹಿನ್ನೆಲೆಯ ಆ ಪರಂಪರೆ, ಪಾವಿತ್ರ್ಯತೆಗೆ ಧಕ್ಕೆ ತರುವುದನ್ನು ಒಪ್ಪಲಾಗದು’ ಎಂದು ಹೇಳಿದ್ದಾರೆ.
‘ಕರಾವಳಿ ಪ್ರದೇಶ ಹಸಿರು ಮತ್ತು ನೀರಿನ ಸಂಗಮ. ಇಂತಹ ಪ್ರಾಕೃತಿಕ ಹಿನ್ನೆಲೆಯಲ್ಲಿ ಕಂಬಳವನ್ನು ಕಣ್ತುಂಬಿಕೊಳ್ಳುವುದೇ ಧನ್ಯತೆಯ ಅನುಭವ ಎನ್ನುವುದು ನನ್ನ ಭಾವನೆ. ಹೀಗಾಗಿ ಮೈಸೂರು ಮತ್ತು ಕರಾವಳಿ ಜನರ ಭಾವನೆಗಳಿಗೆ ನೋವುಂಟು ಮಾಡುವುದು ಬೇಕಿಲ್ಲ’ ಎಂದು ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ.
ಪರಂಪರಾಗತವಾಗಿ ತನ್ನದೇ ಆದ ವೈಶಿಷ್ಟ್ಯದಿಂದ ಕಂಗೊಳಿಸುತ್ತಿರುವ ಮೈಸೂರು ದಸರಾ ಉತ್ಸವದಲ್ಲಿ ಕಂಬಳವನ್ನು ಸೇರಿಸುವ ಅಗತ್ಯವಿಲ್ಲ. ಈವರೆಗೂ ನಡೆದುಕೊಂಡು ಬಂದಿರುವ ದಸರಾಕ್ಕೆ ಧಕ್ಕೆ ತರುವ ಪ್ರಯತ್ನ ಖಂಡಿತ ಬೇಡ.
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) July 11, 2026
ಕಂಬಳವು ಕರಾವಳಿ ಭಾಗದ ಸಾಂಸ್ಕೃತಿಕ ಶ್ರೇಷ್ಠತೆ ಮತ್ತು ನಂಬಿಕೆಯ ಪ್ರತೀಕ. ಭೌಗೋಳಿಕವಾಗಿ ಆ ಭಾಗಕ್ಕೆ ಮಾತ್ರ ಸರಿಹೊಂದುವ ಆಚರಣೆಯೂ…