×
Ad

ಬೆಂಗಳೂರಿನಲ್ಲಿ ಧಾರಕಾರ ಮಳೆ; ಜನಜೀವನ ಅಸ್ತವ್ಯಸ್ತ‌

Update: 2025-05-01 21:17 IST

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಸಂಜೆ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿದೆ. ಹಲವು ಭಾಗಗಳ ರಸ್ತೆಗಳಲ್ಲಿ ನೀರು ನಿಂತಿದ್ದು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ.

ಇಲ್ಲಿನ ಕಾರ್ಪೋರೇಷನ್, ನಾಗಸಂದ್ರ, ಕೆಂಗೇರಿ, ಜಯನಗರ, ಬನಶಂಕರಿ, ಜೆಪಿ ನಗರ ಮತ್ತು ನಗರದ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ.

ಇನ್ನೊಂದೆಡೆ ಮರಗಳ ಕೊಂಬೆಗಳು, ಮರಗಳು ರಸ್ತೆ, ವಿದ್ಯುತ್‌ ತಂತಿ ಮೇಲೆ ಬಿದ್ದಿದ್ದು, ಸಂಚಾರ ಹಾಗೂ ವಿದ್ಯುತ್‌ ವ್ಯತ್ಯಯಕ್ಕೆ ಕಾರಣವಾಗಿದೆ.

ಮಳೆಯಿಂದಾಗಿ ಹಲವು ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಬಿಎಂಟಿಸಿ ಬಸ್ಸುಗಳು ತಡವಾಗಿ ಸಂಚರಿಸುತ್ತಿದ್ದು, ಕಾರ್ಮಿಕರ ದಿನದಂದೂ ಕೆಲಸ ತೆರಳಿದ್ದ ಒಂದಿಷ್ಟು ಉದ್ಯೋಗಿಗಳಿಗೆ ಕೆಲಸ ಬಿಡುವ ವೇಳೆಗೆ ಸುರಿದ ಮಳೆ ಮನೆಗೆ ತೆರಳಲು ಅಡ್ಡಿ ಉಂಟು ಮಾಡಿದೆ.

ಮೇ 1ರಂದು ಸಂಜೆಯಿಂದಲೇ ಗುಡುಗು-ಮಿಂಚು ಸಹಿತ ಭಾರೀ ಗಾಳಿ ಮಳೆ ಆರಂಭವಾಗಿದ್ದರಿಂದ ನಗರದ ಹಲವು ಕಡೆ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿದೆ. ಹಲವು ಭಾಗಗಳ ರಸ್ತೆಗಳಲ್ಲಿ ನೀರು ನಿಂತಿದ್ದು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News