×
Ad

ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ | ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಪತ್ನಿ ನಿಕಿತಾ ಸಿಂಘಾನಿಯ

Update: 2025-02-21 23:41 IST

ಬೆಂಗಳೂರು : ಟೆಕ್ಕಿ ಅತುಲ್ ಶುಭಾಷ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಆತನ ಪತ್ನಿ ನಿಕಿತಾ ಸಿಂಘಾನಿಯ ಮತ್ತವರ ತಾಯಿ ಹಾಗೂ ಸಹೋದರ ಸಲ್ಲಿಸಿದ್ದ ಅರ್ಜಿಯನ್ನು  ಹಿಂಪಡೆದಿದ್ದಾರೆ.

ತಮ್ಮ ವಿರುದ್ಧದ ಪ್ರಕರಣ ರದ್ದುಕೋರಿ ನಿಕಿತಾ ಸಿಂಘಾನಿಯ ಮತ್ತಿತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ  ಹೈಕೋರ್ಟ್‌ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ನ್ಯಾಯಪೀಠಕ್ಕೆ ಅರ್ಜಿದಾರರ ಪರ ವಕೀಲರು ಪ್ರಕರಣ ಹಿಂಪಡೆಯುವುದಾಗಿ ಮೆಮೋ ಸಲ್ಲಿಸಿದರು.

ಇದನ್ನು ದಾಖಲಿಸಿಕೊಂಡ ನ್ಯಾಯಾಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ. ಆದರೆ, ಪ್ರಕರಣದ ಮತ್ತೊಬ್ಬರು ಆರೋಪಿ ನಿಕಿತಾ ಸಿಂಘಾನಿಯ ಅವರ ಚಿಕ್ಕಪ್ಪ ಸುಶೀಲ್ ಕುಮಾರ್ ಸಿಂಘಾನಿಯ ಸಲ್ಲಿಸಿದ್ದ ಅರ್ಜಿಯ ಸಂಬಂಧ ಅತುಲ್ ಸುಭಾಷ್ ಸಹೋದರ ಬಿಕಾಸ್ ಕುಮಾರ್(ದೂರುದಾರ) ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಮುಂದಿನ ವಿಚಾರಣೆಯವರೆಗೂ ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡಿ, ವಿಚಾರಣೆಯನ್ನು ಫೆ.26ಕ್ಕೆ ಮುಂದೂಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News