ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ : ಸೆ.2ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಯಡಿಯೂರಪ್ಪ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದಲ್ಲಿ ದೂರುದಾರ ಮಹಿಳೆ (ಸದ್ಯ ಮೃತಪಟ್ಟಿದ್ದಾರೆ) ಡಿಜಿಪಿ, ಪೊಲೀಸ್ ಆಯುಕ್ತರು, ಪತಿ, ಮಗ, ಸಂಬಂಧಿಕರ ವಿರುದ್ಧವೂ ದೂರು ನೀಡಿದ್ದಾರೆ ಎಂದು ಯಡಿಯೂರಪ್ಪ ಪರ ಹಿರಿಯ ವಕೀಲರು ಹೈಕೋರ್ಟ್‌ಗೆ ಪುನುರುಚ್ಚರಿಸಿದರು.
ಪೋಕ್ಸೋ ಪ್ರಕರಣ ಸಂಬಂಧ ಹೊಸದಾಗಿ ಕಾಗ್ನೈಜೆನ್ಸ್ (ವಿಚಾರಣೆಗೆ ಪರಿಗಣಿಸಿದ) ತೆಗೆದುಕೊಂಡಿದ್ದ ವಿಚಾರಣಾ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಬಿ.ಎಸ್. ಯಡಿಯೂರಪ್ಪ ಅವರು ಎರಡನೇ ಬಾರಿ ಸಲ್ಲಿಸಿರುವ ಅರ್ಜಿ ಕುರಿತು ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶನಿವಾರ ವಿಚಾರಣೆ ನಡೆಸಿತು.
ಯಡಿಯೂರಪ್ಪ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿ, ‘ಅರ್ಜಿದಾರರ ವಿರುದ್ಧ ದೂರು ನೀಡಿದ್ದ ಮಹಿಳೆಗೆ ದೂರು ನೀಡುವ ಹವ್ಯಾಸ ಇತ್ತು. ಆಕೆ ಡಿಜಿಪಿ, ಪೊಲೀಸ್ ಆಯುಕ್ತರು, ತನ್ನ ಪತಿ, ಮಗ, ಸಂಬಂಧಿಕರ ವಿರುದ್ಧವೂ ಇದೇ ರೀತಿಯ ದೂರು ದಾಖಲಿಸಿದ್ದರು. ಯಾರಂದರೆ ಅವರ ಮೇಲೆ ಆಕೆ ದೂರು ನೀಡಿದ್ದಾರೆ. ಇಂತಹ ಘಟನೆ ನಡೆದಿಲ್ಲವೆಂದು ಹೇಳಿದ ಸಾಕ್ಷಿಗಳೂ ಇದ್ದಾರೆ ಎಂದು ಪ್ರತಿಪಾದಿಸಿದರು.
ವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ ಮುಂದೂಡಿತು.