×
Ad

ರವಿಶಂಕರ್ ಗುರೂಜಿ ವಿರುದ್ಧದ ಸರಕಾರಿ ಭೂಮಿ ಒತ್ತುವರಿ ಆರೋಪ | ದಾಖಲೆಗಳನ್ನು ಪರಿಶೀಲಿಸದೆ ತನಿಖೆಗೆ ತಡೆ ನೀಡಲಾಗದು : ಹೈಕೋರ್ಟ್

Update: 2026-01-08 23:45 IST

ಬೆಂಗಳೂರು : ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದಲ್ಲಿ ಸರಕಾರಿ ಜಮೀನು ಒತ್ತುವರಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್ಟ್ ಆಫ್ ಲಿವಿಂಗ್‌ನ ರವಿಶಂಕರ್ ಗುರೂಜಿ ವಿರುದ್ಧ ಪ್ರಕರಣದ ತನಿಖೆಗೆ ದಾಖಲೆಗಳನ್ನು ಪರಿಶೀಲಿಸದೆ ತಡೆ ನೀಡುವುದು ಸೂಕ್ತವಲ್ಲ ಎಂದು ಹೈಕೋರ್ಟ್ ಹೇಳಿದೆ.

ಬೆಂಗಳೂರು ಮೆಟ್ರೊಪಾಲಿಟನ್ ಟಾಸ್ಕ್ ಫೋರ್ಸ್ (ಬಿಎಂಟಿಎಫ್) ದಾಖಲಿಸಿರುವ ಪ್ರಕರಣ ರದ್ದು ಕೋರಿ ರವಿಶಂಕರ್ ಗುರೂಜಿ ಸಲ್ಲಿಸಿದ ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಈ ಹಂತದಲ್ಲಿ ಪ್ರಕರಣದ ತನಿಖೆಗೆ ತಡೆ ನೀಡಿದರೆ ವಿಭಾಗೀಯ ನ್ಯಾಯಪೀಠದ ಅಭಿಪ್ರಾಯಗಳಿಗೆ ವಿರುದ್ಧವಾಗಲಿದೆ. ಆದ್ದರಿಂದ, ಯಾವುದೇ ದಾಖಲೆಗಳನ್ನು ನೋಡದೇ ಪ್ರಕರಣಕ್ಕೆ ತಡೆ ನೀಡುವುದು ಅಥವಾ ಆರ್ಜಿದಾರರ ಪರವಾಗಿ ರಕ್ಷಣೆಯ ಆದೇಶ ನೀಡುವುದು ಸೂಕ್ತವಲ್ಲ ಎಂದು ಹೇಳಿತು.

ಆದರೆ, ತನಿಖೆಯ ನೋಟಿಸ್ ಬಂದರೆ, ಪ್ರಕರಣವನ್ನು ತುರ್ತು ವಿಚಾರಣೆಗೆ ಪರಿಗಣಿಸಲು ಅರ್ಜಿದಾರರು ಮನವಿ ಸಲ್ಲಿಸಬಹುದು ಎಂದು ತಿಳಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಸರಕಾರ ಹಾಗೂ ದೂರುದಾರ ಎಸ್.ಲಕ್ಷ್ಮಣಗೌಡಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಜ.12ಕ್ಕೆ ಮುಂದೂಡಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News