ಬೆಂಗಳೂರು : ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಉಮಿಕಲ್ ಬೆಟ್ಟದ ಮೇಲೆ ಪರಶುರಾಮನ ಪ್ರತಿಮೆಯ ಮರು ಸ್ಥಾಪನೆ ವಿಚಾರವನ್ನು ಹೈಕೋರ್ಟ್ ರಾಜ್ಯ ಸರ್ಕಾರದ ಅಂಗಳಕ್ಕೆ ವರ್ಗಾಯಿಸಿದೆ.

ಪರುಶುರಾಮ ಪ್ರತಿಮೆ ಮರುಸ್ಥಾಪನೆ ಕುರಿತು ಉಡುಪಿ ತಾಲ್ಲೂಕಿನ ವರಂಗ ಗ್ರಾಮದ ಉದಯ ಶೆಟ್ಟಿ ಮುನಿಯಾಲು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಅನು ಶಿವರಾಮನ್ ಹಾಗೂ ನ್ಯಾಯಮೂರ್ತಿ ಟಿ.ಪಿ. ವಿವೇಕಾನಂದ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಪ್ರತಿಮೆಯ ಮರುಸ್ಥಾಪನೆಗೆ ಕೋರಿ ಅರ್ಜಿದಾರರು ಸರ್ಕಾರಕ್ಕೆ (ಪ್ರವಾಸೋದ್ಯಮ ಇಲಾಖೆ) ಮನವಿ ಸಲ್ಲಿಸಿದ್ದಾರೆ ಎಂದು ಅವರ ಪರ ವಕೀಲರು ತಿಳಿಸಿದ್ದಾರೆ. ವಿಷಯವು ಸಂಪೂರ್ಣವಾಗಿ ವಾಸ್ತವಾಂಶಗಳಿಗೆ ಸಂಬಂಧಿಸಿರುವುದರಿಂದ ಅರ್ಜಿದಾರರು 2025ರ ಜುಲೈ 24ರಂದು ಸಲ್ಲಿಸಿರುವ ಮನವಿಯ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳುವುದು ಸರ್ಕಾರದ (ಪ್ರವಾಸೋದ್ಯಮ ಇಲಾಖೆ) ಕರ್ತವ್ಯವಾಗಿದೆ. ಅರ್ಜಿದಾರರ ಮನವಿಯನ್ನು ಪರಿಗಣಿಸುವಾಗ ಉಡುಪಿ ನಿರ್ಮಿತಿ ಕೇಂದ್ರಕ್ಕೆ ನೋಟಿಸ್ ನೀಡಿ ಅವರ ವಾದವನ್ನೂ ಆಲಿಸಬೇಕು ಎಂದು ನಿರ್ದೇಶನ ನೀಡಿ ಅರ್ಜಿ ಇತ್ಯರ್ಥಪಡಿಸಿತು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor