×
Ad

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಯ್ಕೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Update: 2025-06-06 00:07 IST

 ಶೋಭಾ ಕರಂದ್ಲಾಜೆ

ಬೆಂಗಳೂರು : ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಆಯ್ಕೆಯನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ವಿಚಾರವಾಗಿ ನಗರದ ನಂದಿನಿ ಲೇಔಟ್ ನಿವಾಸಿ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮತದಾರ ಬಿ.ಮೋಹನ್ ಕುಮಾರ್ ಎಂಬವರು ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯು ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಗುರುವಾರ ಪ್ರಕಟಿಸಿದ ನ್ಯಾಯಾಮೂರ್ತಿ ಇ.ಎಸ್.ಇಂದಿರೇಶ್ ಅವರಿದ್ದ ಏಕಸದಸ್ಯ ನ್ಯಾಯಾಪೀಠ, ಅರ್ಜಿಯನ್ನು ತಿರಸ್ಕರಿಸಿದೆ. ಆದೇಶದ ವಿಸ್ತೃತ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಶೋಭಾ ಕರಂದ್ಲಾಜೆ ಪರ ವಕೀಲ ವೆಂಕಟೇಶ್ ಪಿ.ದಳವಾಯಿ ವಾದ ಮಂಡಿಸಿದ್ದರು.

ಲೋಕಸಭೆ ಚುನಾವಣೆ ವೇಳೆ ಶೋಭಾ ಕರಂದ್ಲಾಜೆ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣಪತ್ರ (ಫಾರಂ 26)ದಲ್ಲಿ ಅಪೂರ್ಣ ಮಾಹಿತಿ ಕೊಟ್ಟಿದ್ದಾರೆ. ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಬಗ್ಗೆ ಮಾಹಿತಿಯನ್ನು ಮರೆಮಾಚಿದ್ದಾರೆ. ಇದು ಪ್ರಜಾಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 123 (2) ಪ್ರಕಾರ ಚುನಾವಣಾ ಅಕ್ರಮವಾಗಲಿದೆ. ಆದ್ದರಿಂದ ಅವರ ಆಯ್ಕೆಯನ್ನು ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News