×
Ad

ನಟಿ ಸಂಜನಾ ಗಲ್ರಾನಿ, ಉದ್ಯಮಿ ಶಿವಪ್ರಕಾಶ್ ವಿರುದ್ಧದ ಎಫ್ಐಆರ್ ರದ್ದುಗೊಳಿಸಿದ ಹೈಕೋರ್ಟ್

Update: 2024-06-24 22:02 IST

ಬೆಂಗಳೂರು : ಸಿಸಿಬಿ ಪೊಲೀಸರ ಡ್ರಗ್ಸ್ ವಿಭಾಗವು ಉದ್ಯಮಿ ಶಿವಪ್ರಕಾಶ್, ನಟಿ ಸಂಜನಾ ಗಲ್ರಾನಿ ಮತ್ತು ಆದಿತ್ಯ ಅಗರ್ವಾಲ್ ಎಂಬವರ ವಿರುದ್ಧದ ಎಫ್ಐಆರ್ ಗಳನ್ನು ಹೈಕೋರ್ಟ್ ರದ್ದು ಮಾಡಿ ಆದೇಶಿದೆ.

ಪ್ರಕರಣ ರದ್ದು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಮೇಲಿನ ಆದೇಶ ನೀಡಿದೆ.

ವಿಚಾರಣೆ ವೇಳೆ ಶಿವಪ್ರಕಾಶ್ ಪರವಾಗಿ ವಕೀಲರು, ಅರ್ಜಿದಾರರ ವಿರುದ್ಧ ಪೊಲೀಸರು ದಾಖಲಿಸಿರುವ ಎಫ್ಐಆರ್ ಕಾನೂನುಬಾಹಿರವಾಗಿದೆ. ಆರೋಪಗಳಿಗೆ ಸಾಕ್ಷ್ಯಧಾರಗಳು ಇಲ್ಲ. ಅದ್ದರಿಂದ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಸಲ್ಲಿಸಿರುವ ಚಾರ್ಚ್ ಶೀಟ್ ಸಂಪೂರ್ಣ ಸತ್ಯಕ್ಕೆ ದೂರವಾಗಿದೆ ಎಂದು ಆರೋಪಿಸಿದರು.

ಅಲ್ಲದೆ ಚಾರ್ಚ್ ಶೀಟ್ ನಲ್ಲಿ ಸೂಕ್ತ ಸಾಕ್ಷಿಗಳನ್ನು ಸಲ್ಲಿಸಿಲ್ಲ. ಇನ್ನು ಮಾದ ವಸ್ತುಗಳನ್ನು ಆರೋಪಿಗಳಿಂದ ಜಪ್ತಿ ಮಾಡಿಲ್ಲ. ಹೀಗಾಗಿ ಪ್ರಕರಣ ರದ್ದಿಗೆ ಮನವಿ ಮಾಡಿದರು. ವಾದ ಆಲಿಸಿದ ಪೀಠ ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News