ಬಿಜೆಪಿ ವಿರುದ್ಧ ಪತ್ರಿಕಾ ಜಾಹೀರಾತು ಪ್ರಕರಣ: ಸಿದ್ದರಾಮಯ್ಯ ವಿರುದ್ಧದ ಮೊಕದ್ದಮೆಗೆ ಹೈಕೋರ್ಟ್ ತಡೆ
Update: 2025-07-11 15:23 IST
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ವಿರುದ್ಧ ಭ್ರಷ್ಟಾಚಾರ ಆರೋಪಿಸಿ ದಿನ ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಹೈಕೋರ್ಟ್ ತಡೆ ನೀಡಿದೆ.
ಮಾನನಷ್ಟ ಮೊಕದ್ದಮೆ ರದ್ದು ಕೋರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ.ಎಸ್. ಆರ್. ಕೃಷ್ಣಕುಮಾರ್ ಅವರಿದ್ದ ಪೀಠ ಮಧ್ಯಂತರ ತಡೆ ನೀಡಿದೆ.
2023ರ ರಾಜ್ಯ ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ವಿರುದ್ಧ ಭ್ರಷ್ಟಾಚಾರ ಆರೋಪಿಸಿ ಕಾಂಗ್ರೆಸ್ ಪಕ್ಷವು ದಿನಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಿತ್ತು. ಇದರ ವಿರುದ್ಧ ಬಿಜೆಪಿಯಿಂದ ಖಾಸಗಿ ದೂರು ದಾಖಲಾಗಿತ್ತು. ಹೀಗಾಗಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ ಜಾರಿಗೊಳಿಸಿತ್ತು. ೀ ಪ್ರಕರಣ ರದ್ದು ಕೋರಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೊರೆ ಹೋಗಿದ್ದರು.