×
Ad

'ಗೃಹಲಕ್ಷ್ಮಿ' ಹಣದಿಂದ ವಾಷಿಂಗ್ ಮಷಿನ್ ಖರೀದಿಸಿದ ಗೃಹಿಣಿ: ವೀಡಿಯೊ ಹಂಚಿಕೊಂಡ ಸಿದ್ದರಾಮಯ್ಯ

Update: 2025-10-02 12:08 IST

ಬೆಂಗಳೂರು: ಮಹಿಳೆಯೊಬ್ಬರು ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಮಹಾನವಮಿಯ ದಿನ(ಆಯುಧ ಪೂಜೆ) ಹೊಸ ವಾಷಿಂಗ್ ಮಷಿನ್ ಖರೀದಿಸಿ ಪೂಜೆ ಸಂಭ್ರಮಿಸಿದ್ದಾರೆ. ನೂತನ ವಾಷಿಂಗ್ ಮಷಿನ್ ಗೆ ಗೃಹಿಣಿ ಪೂಜೆ ಸಲ್ಲಿಸುತ್ತಿರುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.

"ರಾಮನಗರದ ಗ್ಯಾರಂಟಿ ಯೋಜನೆಯ ಫಲಾನುಭವಿ ಮಹಿಳೆ ಬಿ.ಕೆ.ತುಳಸಿ ಕಳೆದ ಏಳು ತಿಂಗಳ ಗೃಹಲಕ್ಷ್ಮಿ ಹಣ ಕೂಡಿಟ್ಟು ಮಹಾನವಮಿಯ ದಿನ ಹೊಸ ವಾಷಿಂಗ್ ಮೆಷಿನ್ ಖರೀದಿಸಿ, ಪೂಜಿಸುತ್ತಿರುವ ವೀಡಿಯೊ ನನ್ನ ಹಬ್ಬದ ಸಂಭ್ರಮವನ್ನು ಇಮ್ಮಡಿಯಾಗಿಸಿತು" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

"ಸ್ತ್ರೀ ಸಬಲೀಕರಣದ ಆಶಯದೊಂದಿಗೆ ಜಾರಿಗೆ ಕೊಟ್ಟ ಗೃಹಲಕ್ಷ್ಮಿ ಯೋಜನೆಯು ಸ್ತ್ರೀಶಕ್ತಿಯನ್ನು ಆರಾಧಿಸುವ ನವರಾತ್ರಿಯಲ್ಲಿ ಮಹಿಳೆಯೊಬ್ಬರ ಸಂಭ್ರಮಕ್ಕೆ ಕಾರಣವಾಗಿರುವುದು ಹೆಚ್ಚು ಅರ್ಥಪೂರ್ಣ ಮತ್ತು ಸಾರ್ಥಕವೆನಿಸಿದೆ. ಇಂತಹ ಇನ್ನಷ್ಟು ಕುಟುಂಬಗಳ ಖುಷಿಗೆ ನಮ್ಮ ಯೋಜನೆ ಸಾಕ್ಷಿಯಾಗಲಿ ಎಂದು ಆಶಿಸುತ್ತೇನೆ" ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News