ಐಎಎಸ್ ಅಧಿಕಾರಿ ವೈ.ಎಸ್.ಪಾಟೀಲ್ಗೆ ಹೆಚ್ಚುವರಿ ಹೊಣೆಗಾರಿಕೆ
ಬೆಂಗಳೂರು : ಐಎಎಸ್ ಅಧಿಕಾರಿ ಯಲನಗೌಡ ಶಿವನಗೌಡ ಪಾಟೀಲ್(ವೈ.ಎಸ್.ಪಾಟೀಲ್) ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ನಾಟಕ ರೇಶ್ಮೆ ಮಾರುಕಟ್ಟೆ ನಿಗಮ(ಕೆಎಸ್‍ಐಸಿ) ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ಹೆಚ್ಚುವರಿಯಾಗಿ ನೇಮಕ ಮಾಡಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.
2012ರ ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿರುವ ವೈ.ಎಸ್.ಪಾಟೀಲ್ ಅವರು, ಬೆಂಗಳೂರಿನ ಅತಿಸಣ್ಣ ಹಾಗೂ ಸೂಕ್ಷ್ಮ ಕೈಗಾರಿಕೆಗಳ ಇಲಾಖೆ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸರಕಾರದ ಆದೇಶದಲ್ಲಿ ತಿಳಿಸಲಾಗಿದೆ.