×
Ad

ಅಕ್ರಮ ಹಣ ಸಂದಾಯ ಪ್ರಕರಣ : ಕೇರಳ ಸಿಎಂ ಪುತ್ರಿ ವೀಣಾ ಪಿಣರಾಯಿ ಸಲ್ಲಿಸಿದ್ದ ಅರ್ಜಿ ವಜಾ

Update: 2024-02-17 11:31 IST

ಬೆಂಗಳೂರು: ಕೇಂದ್ರ ತನಿಖಾ ಸಂಸ್ಥೆ ಎಸ್ಎಫ್ಐಒ ನಿಂದ ತನಿಖೆ ರದ್ದು ಕೋರಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮಗಳು ವೀಣಾ ಪಿಣರಾಯಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಎಕ್ಸಲಾಜಿಕ್ ಸಲ್ಯೂಷನ್ಸ್ ಪ್ರೈ. ಲಿ. ನ ನಿರ್ದೇಶಕಿಯಾಗಿರುವ ಟಿ.ವೀಣಾ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿ ತೀರ್ಪು ನೀಡಿದೆ. ಟಿ.ವೀಣಾ  ನಿರ್ದೇಶಕರಾಗಿರುವ ಎಕ್ಸಾಲಜಿಕ್ ಸಲುಷನ್ಸ್ ಎಂಬ ಐಟಿ ಕಂಪೆನಿಯ ವಿರುದ್ದ ತನಿಖೆ ನಡೆಸುವಂತೆ ಕೇಂದ್ರ ಸರಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಆದೇಶ ನೀಡಿದೆ. ಯಾವುದೇ ಸೇವೆ ನೀಡದಿದ್ದರೂ ಕೊಚ್ಚಿನ್ ಮಿನರಲ್ಸ್ ನಿಂದ ಹಣ ಸಂದಾಯ ಮಾಡಿರುವ ಆರೋಪಗಳ ಹಿನ್ನೆಲೆಯಲ್ಲಿ ಅರ್ಜಿ ವಜಾಗೊಳಿಸಿರುವುದಾಗಿ ಹೈಕೋರ್ಟ್ ಆದೇಶದಲ್ಲಿ ಉಲ್ಲೇಖಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News