×
Ad

ಚಾಕುವಿನ ಹಿಡಿಕೆಯೊಳಗೆ ಚಿನ್ನ ಇಟ್ಟು ಅಕ್ರಮ ಸಾಗಣೆ; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕ ವಶಕ್ಕೆ

Update: 2023-11-26 19:34 IST

ಸಾಂದರ್ಭಿಕ ಚಿತ್ರ (PTI)

ಬೆಂಗಳೂರು: ಚಾಕುವಿನ ಹಿಡಿಕೆಯೊಳಗೆ ಟೊಳ್ಳಾದ ಜಾಗದಲ್ಲಿ ಚಿನ್ನವನ್ನು ಅಡಗಿಸಿಟ್ಟು ಅಕ್ರಮ ಸಾಗಣೆ ಮಾಡುತ್ತಿದ್ದ ಪ್ರಯಾಣಿಕನೊಬ್ಬನನ್ನು ಇಲ್ಲಿನ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಬಗ್ಗೆ ವರದಿಯಾಗಿದೆ.

ದುಬೈನಿಂದ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ  ಬಂದಿದ್ದ ಪ್ರಯಾಣಿಕನನ್ನು ಖಚಿತ ಮಾಹಿತಿ ಮೇರೆಗೆ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದ್ದಾರೆ. ಈ ವೇಳೆ, ಚಾಕುವಿನ ಹಿಡಿಕೆಯೊಳಗೆ ಟೊಳ್ಳಾದ ಜಾಗದಲ್ಲಿ ಚಿನ್ನವನ್ನು ಅಡಗಿಸಿಟ್ಟಿರುವುದು ಪತ್ತೆಯಾಗಿದೆ. ಈ ಪ್ರಯಾಣಿಕನನ್ನು ವಶಕ್ಕೆ ಪಡೆಯಲಾಗಿದ್ದು, 298.25 ಗ್ರಾಂ ಚಿನ್ನವನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News