×
Ad

ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಸ್ಥಾಪನೆ

Update: 2024-02-16 20:21 IST

ಬೆಂಗಳೂರು: ಸಾಮಾಜಿಕ ನ್ಯಾಯದ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಪತ್ರಕರ್ತರಿಗೆ “ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ” ಸ್ಥಾಪಿಸಿ, ಪ್ರತಿ ವರ್ಷ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಶುಕ್ರವಾರ ನಗರದ ವಿಧಾನಸೌಧದಲ್ಲಿ 2024-25ನೇ ಸಾಲಿನ ಬಜೆಟ್ ಮಂಡಿಸಿದ ಅವರು, 1924ರಲ್ಲಿ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನವು ಈ ವರ್ಷ ಶತಮಾನದ ಮೈಲಿಗಲ್ಲನ್ನು ಪೂರ್ಣಗೊಳಿಸುತ್ತಿದ್ದು, ಈ ಅಧಿವೇಶನದ ಕೊಡುಗೆಯನ್ನು ಸ್ಮರಿಸಲು 2 ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗುವುದು ಎಂದಿದ್ದಾರೆ.

►  ಮಹಾತ್ಮಾ ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ ಸ್ಥಳಗಳಲ್ಲಿ ಸ್ಮರಣಾರ್ಥ ಫಲಕಗಳ ಅಳವಡಿಕೆ.

► ವಾರ್ತಾ ಇಲಾಖೆಯು ಪ್ರಕಟಿಸುತ್ತಿರುವ ವಾರ್ತಾ ಜನಪದ ಮತ್ತು ಮಾರ್ಚ್ ಆಫ್ ಕರ್ನಾಟಕ ಮಾಸ ಪತ್ರಿಕೆಗಳನ್ನು ಡಿಜಿಟೈಸ್ ಮಾಡುವ ಮೂಲಕ ಇನ್ನೂ ಹೆಚ್ಚಿನ ಜನರಿಗೆ ತಲುಪಿಸಲು ಕ್ರಮ.

►  ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಸೌಲಭ್ಯ ಪ್ರಾರಂಭ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News