ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯದಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಪತ್ರಿಕೋದ್ಯಮದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಮಹಿಳಾ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‌ಶಿಪ್‌ ಗಾಗಿ ಅವಕಾಶ ಕಲ್ಪಿಸಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ತಿಳಿಸಿದ್ದಾರೆ.

ಬರವಣಿಗೆಯಲ್ಲಿ ಪರಿಣತಿ ಮತ್ತು ಪತ್ರಿಕೋದ್ಯಮದಲ್ಲಿ ಆಸಕ್ತಿ ಹೊಂದಿರುವ 2022-23, 2023-24, 2024-2025 ಹಾಗೂ 2025-2026ನೇ ಶೈಕ್ಷಣಿಕ ವರ್ಷದಲ್ಲಿ ಪಡೆದ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಒಟ್ಟು 20 ಅಭ್ಯರ್ಥಿಗಳಿಗೆ ಇಂಟರ್ನ್‌ಶಿಪ್‌ ಅವಕಾಶ ಒದಗಿಸಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಿಂಗಳ ಇಂಟರ್ನ್‌ಶಿಪ್‌ ಗೆ ಅವಕಾಶ ಕಲ್ಪಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕಾಡೆಮಿ ವತಿಯಿಂದ ಸ್ಟೈಪಂಡ್ ನೀಡಲಾಗುವುದು. ಅಭ್ಯರ್ಥಿಗಳು ತಮ್ಮ ಸ್ವವಿವರದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಪೂರಕ ದಾಖಲೆಗಳೊಂದಿಗೆ ಗೂಗಲ್ ಫಾರ್ಮ್ https://docs.google.com/forms/d/e/1FAIpQLSfYwla- tbEhbvzUmRvWdsOCn44knMZ7orPgzExhxJsmUxIxlQ/viewform  ರಲ್ಲಿ ಅರ್ಜಿ ಸಲ್ಲಿಸುವುದು. ಅಭ್ಯರ್ಥಿಗಳ ಆಯ್ಕೆಯ ಅಂತಿಮ ತೀರ್ಮಾನ ಅಕಾಡೆಮಿಯ ಸಮಿತಿಯದ್ದೇ ಅಗಿರುತ್ತದೆ.

ಅರ್ಜಿ ಸಲ್ಲಿಸಲು ಅ.23ರಂದು ಕೊನೆಯ ದಿನವಾಗಿದೆ. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor